ಚಿತ್ರದುರ್ಗ: ಕರ್ನಾಟಕ ಬಂದ್ ಮಾಡುವ ಅನಿವಾರ್ಯತೆ ಇಲ್ಲ. ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಡೆದ ಪುಂಡಾಟಿಕೆಗಳನ್ನು ಸರ್ಕಾರ ಎಂದಿಗೂ ಸಹಿಸುವುದಿಲ್ಲ. ನಮ್ಮ ಸಾಹಿತ್ಯ, ಭಾಷೆ, ಸಂಸ್ಕೃತಿಗೆ ಪ್ರಥಮ ಆದ್ಯತೆ ನೀಡುತ್ತೇವೆ. ಇದರ ವಿರುದ್ಧ ಮಾತನಾಡುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಘಟನೆ ಬಗ್ಗೆ ಸರ್ಕಾರ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಗೃಹ ಇಲಾಖೆ ಎಚ್ಚರಿಕೆ ವಹಿಸಿದೆ ಎಂದ ಅವರು, ಕನ್ನಡ ಸಂಘಟನೆ, ಸಂಸ್ಥೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಪ್ರತಿ ಬಾರಿ ಇಂತಹ ಘಟನೆ ಆದಾಗ ಬಂದ್ ಮಾಡುವುದು ಸರಿಯಲ್ಲ. ಬಂದ್ ಕೈಬಿಡಿ ಎಂದು ಮನವಿ ಮಾಡಿದರು.
Advertisement
Advertisement
ಇದೇ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮತಾಂತರ ಕಾಯ್ದೆ ವಾಪಸ್ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಅವರು, ಸರ್ಕಾರ ಬರುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅದಕ್ಕೆ ಮತಾಂತರ ಕಾಯ್ದೆ, ಗೋಹತ್ಯೆ ಕಾನೂನು, ಟಿಪ್ಪು ಜಯಂತಿ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಓಬವ್ವ ಜಯಂತಿ ಮಾಡುವ ಬೊಮ್ಮಾಯಿ ಬೇಕೋ? ಟಿಪ್ಪು ಜಯಂತಿ ಮಾಡುವ ಸಿದ್ದರಾಮಯ್ಯ ಬೇಕೋ? ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ಇದೆಲ್ಲವನ್ನು ಕೂಡಾ ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪಕ್ಷದ ಆಂತರಿಕ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ಕಾಣಿಸಲಾಗೋದು: ಮಹಾಂತೇಶ್ ಕವಟಗಿಮಠ
Advertisement
Advertisement
ಮತಾಂತರ ಕಾಯ್ದೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆಸೆ, ಆಮೀಷ ಒಡ್ಡಿ ಮತಾಂತರ ಮಾಡಬಾರದು ಎಂಬುದು ಕಾನೂನಿನಲ್ಲಿದೆ. ಈ ಕಾನೂನಿನಲ್ಲಿ ತಪ್ಪೇನಿಲ್ಲ. ಈ ಬಗ್ಗೆ ರಾಜ್ಯದ ಜನತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಟ್ಟ ಸಂದೇಶ ಕೊಡುತ್ತಿದ್ದಾರೆ. ಟಿಪ್ಪು ಜಯಂತಿ, ಮತಾಂತರ ಕಾಯ್ದೆ ತರುವೆ ಎಂದು ಪ್ರತ್ಯೇಕ ಸಂದೇಶ ನೀಡುತ್ತಾರೆ. ನಾವು ಇದನ್ನು ದೊಡ್ಡ ಪ್ರಮಾಣದಲ್ಲಿ ಎದುರಿಸುತ್ತೇವೆ, ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ವಚನಗಳಲ್ಲಿ ‘ಲಿಂಗದೇವ’ ಬದಲಾಗಿ ‘ಕೂಡಲಸಂಗಮದೇವ’ ವಚನಾಂಕಿತ ಬಳಸಲು ನಿರ್ಧಾರ: ಗಂಗಾದೇವಿ
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಸಿಎಂ ಬದಲಾವಣೆ ನೂರಕ್ಕೆ ನೂರು ಊಹಾಪೂಹವಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರೇ ದಾವಣಗೆರೆಗೆ ಬಂದಾಗ ಸ್ಪಷ್ಟಪಡಿಸಿದ್ದರು. ನಿನ್ನೆ ಅರುಣ್ ಸಿಂಗ್ ಅವರು ಕೂಡಾ ಹೇಳಿದ್ದಾರೆ. ಮುಂದಿನ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ಅಭಿಪ್ರಾಯಪಟ್ಟರು.