ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರ ಆಡಳಿತ ಎಂದರೆ “ಭರವಸೆ ಉಚಿತ, ಸಾಲ ಖಚಿತ”. ರಾಜ್ಯದ ಬೊಕ್ಕಸದ ಮೇಲೆ ಋಣಭಾರ ಹೊರಿಸುವ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ (Sunil Kumar) ವ್ಯಂಗ್ಯವಾಡಿದ್ದಾರೆ.
ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ? (1/4) pic.twitter.com/CdpmVFAeMj
— Sunil Kumar Karkala (@karkalasunil) January 13, 2023
Advertisement
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಎಲ್ಲ ಆಯಾಮ ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9,000 ಕೋಟಿ ರೂ. ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ 9,000 ಕೋಟಿ ಸಾಲದ ʼಹೂಡಿಕೆʼ ಮಾಡುವ ಯೋಚನೆ ನಿಮ್ಮದಾಗಿದೆ. “ಭರವಸೆ ಉಚಿತ, ಸಾಲ ಖಚಿತ” ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಗಡ್ಕರಿ ಎಲ್ಲಿ ಸಿಗ್ತಾರೋ ಅಲ್ಲಿ ಬಾಂಬ್ ಸ್ಪೋಟಿಸಿ ಸಾಯಿಸುತ್ತೇವೆ: ಹಿಂಡಲಗಾ ಜೈಲಿನಿಂದಲೇ ಬೆದರಿಕೆ ಹಾಕಿದ್ದ ಕೈದಿ
Advertisement
ಸಿದ್ದರಾಮಯ್ಯ ಅವರೇ, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ? – ಶ್ರೀ @karkalasunil #CorruptCongress #ಪ್ರಜಾದ್ರೋಹಯಾತ್ರೆ pic.twitter.com/WK8sqhVTQ6
— BJP Karnataka (@BJP4Karnataka) January 13, 2023
Advertisement
ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ ʼವಿತ್ತನೀತಿʼಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ. ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ ನೀತಿ ಆದರ್ಶವಾಗಬಹುದು ಎಂದು ತಿರುಗೇಟು ನೀಡಿದ್ದಾರೆ.
Advertisement
ರೈತರ ಕೃಷಿ ಪಂಪ್ ಸೆಟ್‌ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ.
ಎಲ್ಲ ಆಯಾಮಗಳನ್ನು ಪರಿಶೀಲಿಸಿದಾಗ ನೀವು ಕೊಟ್ಟ ಉಚಿತ ವಿದ್ಯುತ್ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ ೯೦೦೦ ಕೋಟಿ ರೂ. ಬೇಕಾಗುತ್ತದೆ. (7/8)
— Sunil Kumar Karkala (@karkalasunil) January 15, 2023
ಕುತ್ತಿಗೆವರೆಗೆ ಮುಳುಗಿದ್ದ ಎಸ್ಕಾಂಗಳನ್ನು ಸಾಲದ ಹೊರೆಯಿಂದ ಮೇಲೆತ್ತಿದ್ದೇವೆ ಎಂದು ಬೆನ್ನು ಚಪ್ಪರಿಸಿಕೊಂಡಿದ್ದೀರಿ, ಸಂತೋಷ. ಸಮಕಾಲೀನ ರಾಜಕಾರಣದ ʼಉತ್ತರಪುರುಷʼ ಎಂದು ಬಿರುದಾಂಕಿತರಾದ ನಿಮ್ಮಿಂದ ಇಂಥ ಸುಳ್ಳು ಬಡಾಯಿಗಿಂತ ಹೆಚ್ಚಿನದನ್ನು ನಿರೀಕ್ಷಿಸಲು ಸಾಧ್ಯವೇ? ನೀವು ಎಸ್ಕಾಂಗಳ ಮೇಲೆ ಹೊರಿಸಿ ಹೋದ ಸಾಲದ ಗಂಟನ್ನು ಇಳಿಸಿದ್ದು ನಾವು ಎಂಬುದನ್ನು ಮರೆಯಬೇಡಿ. ನೀವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಸಿಎಲ್ ಮೇಲಿನ 10,203 ಕೋಟಿ ರೂ. ಸಾಲವೂ ಸೇರಿದಂತೆ 2013ರಿಂದ 2018ರ ಅವಧಿಯಲ್ಲಿ 33,414.20 ಕೋಟಿ ರೂ. ಸಾಲದ ಗಂಟನ್ನು ಎಸ್ಕಾಂಗಳ ಮೇಲೆ ಹೊರಿಸಿದ್ದಿರಿ. ನೀವೇ ಸ್ಟೇರಿಂಗ್ ಹಿಡಿದು ʼಸಮನ್ವಯʼ ಸಾಧಿಸಿದ ಮೈತ್ರಿ ಸರ್ಕಾರದ ಕಾಲದಲ್ಲಿ 27,178 ಕೋಟಿ ರೂ. ಸಾಲದ ಹೊರೆ ಎಸ್ಕಾಂಗಳ ಮೇಲೆ ಬಿತ್ತು ಎಂದು ಸಿದ್ದರಾಮಯ್ಯ ಕಾಲದಲ್ಲಿ ಇಂಧನ ಇಲಾಖೆ ಮೇಲೆ ಬಿದ್ದ ಸಾಲದ ಹೊರೆಯನ್ನು ನೆನಪಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ವಿರುದ್ಧ ಸಿಎಂ, ನಿರಾಣಿ ಗರಂ; ಯತ್ನಾಳ್‌ಗೆ ಮೂಗುದಾರ ಹಾಕುವ ಬಗ್ಗೆ ನಡ್ಡಾ ಎದುರು ಪ್ರಸ್ತಾಪಕ್ಕೆ ನಿರ್ಧಾರ
ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕೆಂಬ “ವಿತ್ಥನೀತಿ”ಯನ್ನು @siddaramaiah ನವರು ರಾಜ್ಯದ ಮೇಲೆ ಹೇರಿ ಹೋಗಿದ್ದಾರೆ. ಸಾಲ ಎತ್ತುವಳಿಯನ್ನೇ ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸುವ ಅವರ ಭಂಡತನ ಅರ್ಥಶಾಸ್ತ್ರದ ಹೊಸ ವ್ಯಾಖ್ಯಾನವೇ ಸರಿ. ದಿವಾಳಿ ಹೊಂದುವುದನ್ನೇ ಪ್ರಧಾನ ಗುರಿಯಾಗಿಸಿಕೊಂಡ ಅರ್ಥವ್ಯವಸ್ಥೆಗೆ ನಿಮ್ಮ ನೀತಿ ಆದರ್ಶ (1/8)
— Sunil Kumar Karkala (@karkalasunil) January 15, 2023
ವಾಸ್ತವವನ್ನು ಮರೆ ಮಾಚುವುದಕ್ಕಾಗಿ ನೀವು ಸಾಲವನ್ನು ಬಂಡವಾಳ ಹೂಡಿಕೆ ಎಂದು ವ್ಯಾಖ್ಯಾನಿಸಿದ್ದೀರಿ. ಇಷ್ಟೊಂದು ಸಾಲ ಮಾಡಿದ ಮೇಲೆ ಹೊರೆ ಇಳಿಸಿದ್ದೇನೆ ಎಂದು ಬೆನ್ನು ತಟ್ಟಿಕೊಳ್ಳುವ ನಿಮ್ಮ ಜ್ಞಾನನಿಧಿಯ ಬಗ್ಗೆ ಸಾಮಾನ್ಯ ಪ್ರಜೆಯೂ ಸರ್ವಾಂಗಗಳಿಂದಲೂ ಕನಿಕರ ವ್ಯಕ್ತಪಡಿಸಬಹುದು. ಈ ಕಾರಣಕ್ಕಾಗಿಯೇ ನೀವು ಕತ್ತಲೆಯಲ್ಲಿ ಬಜೆಟ್ ಓದಿದ ಸಂಗತಿಯನ್ನು ನಾನು ನೆನಪಿಸಿದ್ದೇನೆ. ನುಡಿದಂತೆ ನಡೆಯುವವರು ನಾವು ಎಂದು ಅತಿಯಾಗಿ ಬೆನ್ನು ತಟ್ಟಿಕೊಳ್ಳಬೇಡಿ. ನಿಮ್ಮ ನಡೆ-ನುಡಿಯೊಳಗಿನ ಕಾಪಟ್ಯ ಎಲ್ಲರಿಗೂ ಗೊತ್ತು. ಇದೇ ನನ್ನ ಕೊನೆಯ ಚುನಾವಣೆ ಎಂದು ಎಷ್ಟು ಬಾರಿ ನುಡಿದಿರಿ, ಎಷ್ಟು ಬಾರಿ ತಪ್ಪಿದಿರಿ? ರಾಜಕೀಯವಾಗಿ ಮರುಜನ್ಮ ನೀಡಿದ ಬಾದಾಮಿಯನ್ನು ತ್ಯಜಿಸಿ ಕೋಲಾರಕ್ಕೆ ವಲಸೆ ಹೊರಟಿದ್ದೀರಿ. ಇದು ನುಡಿದಂತೆ ನಡೆಯುವ ಪರಿಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಮಾತು, ಕೃತಿ ಒಂದು ರೀತಿಯಲ್ಲಿ ʼಹಸ್ತಿ ದಂತʼ ಇದ್ದಂತೆ. ಆನೆಗೆ ಇರುವುದು ಎರಡೇ ದಂತ ಎಂದು ಭಾವಿಸುವುದು ಎಷ್ಟು ಮೂರ್ಖತನವೋ, ಸಿದ್ದರಾಮಯ್ಯನವರ ನುಡಿಯಂತೆ ನಡೆ ಎಂಬುದು ಅಷ್ಟೇ ಅಪಾಯಕಾರಿ. ರೈತರ ಕೃಷಿ ಪಂಪ್ ಸೆಟ್‌ಗಳಿಗೆ ನೀಡಬೇಕಿದ್ದ ವಿದ್ಯುತ್ ಸಬ್ಸಿಡಿಯನ್ನೇ ಬಾಕಿ ಇಟ್ಟು ಹೋದ ಘನ ಸರ್ಕಾರ ತಮ್ಮದ್ದಾಗಿತ್ತು ಎಂಬುದನ್ನು ಮರೆಯದಿರಿ ಎಂದು ಕುಟುಕಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k