ಬೆಂಗಳೂರು: ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವರ್ಷ ಹುಟ್ಟುಹಬ್ಬ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಧನ್ಯವಾದ ತಿಳಿಸಿದ್ದಾರೆ.
ಕೊರೊನಾ ವೈರಸ್ ಹರಡುವ ಆತಂಕದಲ್ಲಿ ಸಿಎಂ ಯಡಿಯೂರಪ್ಪ ಅವರು ಒಂದು ವಾರ ಕರ್ನಾಟಕ ಬಂದ್ ಮಾಡಿ ಆದೇಶ ಹೊರಡಿಸಿದ್ದರು. ಅದರ ಬೆನ್ನಲ್ಲೇ ಪುನೀತ್ ರಾಜ್‍ಕುಮಾರ್ ಕೂಡ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದರು. ಹೀಗಾಗಿ ಸಚಿವ ಸುರೇಶ್ ಕುಮಾರ್ ಪುನೀತ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಿಮ್ಮ ಪ್ರೀತಿ, ವಿಶ್ವಾಸ ನನ್ನ ಮೇಲೆ ಇರುತ್ತೆ – ಅಭಿಮಾನಿಗಳಲ್ಲಿ ಪುನೀತ್ ಮನವಿ
ಪುನೀತ್ ಮಾತನಾಡಿದ್ದ ಟ್ವಿಟ್ಟರ್ ವಿಡಿಯೋವನ್ನು ಶೇರ್ ಮಾಡಿದ ಸಚಿವರು ಅದಕ್ಕೆ, “ಇದಕ್ಕೆನ್ನುತ್ತಾರೆ ಸಮಾಜಮುಖಿ ಸಂದೇಶ. ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಪುನೀತ್ ವಿಡಿಯೋದಲ್ಲಿ ಹೇಳಿದ್ದೇನು?
“ಎಲ್ಲಾ ಸಮಸ್ತ ಅಭಿಮಾನಿ ದೇವರುಗಳಿಗೆ ನಮಸ್ಕಾರ. ಈ ವರ್ಷ ನಾನು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಯಾರೂ 17 ರಂದು ತಮ್ಮ ತಮ್ಮ ಊರುಗಳಿಂದ ಮನೆಯ ಹತ್ತಿರ ಬರಬೇಡಿ. ನಾನು ಮನೆಯಲ್ಲೂ ಇರುವುದಿಲ್ಲ” ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಕ್ಕೆನ್ನುತ್ತಾರೆ ಸಮಾಜಮುಖಿ ಸಂದೇಶ. ಧನ್ಯವಾದಗಳು @PuneethRajkumar https://t.co/IjKKVZcMpy
— S.Suresh Kumar (@nimmasuresh) March 14, 2020
“ಯಾಕೆಂದರೆ ಇಡೀ ದೇಶದಲ್ಲಿ ಕೊರೊನಾ ವೈರಸ್ ಸಮಸ್ಯೆ ಇದೆ. ಇದಕ್ಕಾಗಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವೆಲ್ಲರೂ ಸೇರಿ ಕೈ ಜೋಡಿಸಬೇಕು. ಹಾಗಾಗಿ ಬೇರೆ ಬೇರೆ ಊರುಗಳಿಂದ ಬಂದು ನಿಮ್ಮ ಪ್ರೀತಿ, ವಿಶ್ವಾಸ ತೋರಿಸುತ್ತಿದ್ರಿ. ಖಂಡಿತವಾಗಿ ನಿಮ್ಮ ಪ್ರೀತಿ ಮತ್ತು ವಿಶ್ವಾಸ ನನ್ನ ಮೇಲೆ ಇರುತ್ತದೆ ಎಂದು ನಾನು ಭಾವಿಸಿದ್ದೇನೆ. ಎಲ್ಲರಿಗೂ ಒಳ್ಳೆಯದಾಗಲಿ, ಹುಷಾರಾಗಿರಿ” ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.