ಹಾವೇರಿ: ಇವತ್ತು ರಾಷ್ಟ್ರೀಯ ರೈತರ ದಿನಾಚರಣೆ ದಿನ. ವರ್ಷವಿಡೀ ಕೆಲಸ ಮಾಡುವ ಅನ್ನದಾತರ ದಿನ. ಅದೆಷ್ಟು ರೈತರಿಗೆ ರೈತ ದಿನ ಅನ್ನೋದು ಗೊತ್ತಿಲ್ಲ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಸನ್ಮಾನ ಮಾಡಿ ಗೌರವಿಸಿದ್ದಾರೆ.
ಸುರೇಶ್ ಕುಮಾರ್ ಹಾವೇರಿ ತಾಲೂಕು ನೆಲೋಗಲ್ಲ ಗ್ರಾಮದ ಪ್ರೌಢ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಚನ್ನಬಸನಗೌಡ ಹೊಂಬರಡಿಗೆ ಶಾಲು ಹೊದಿಸಿ ನಮನ ಸಲ್ಲಿಸಿದ್ದಾರೆ. ಅಲ್ಲದೆ ಆ ಪೋಟೋವನ್ನ ತಮ್ಮ ಫೇಸ್‍ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರೈತರು ಚೆನ್ನಾಗಿದ್ರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತೆ: ದರ್ಶನ್
Advertisement
ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಈ "#ಅನ್ನದಾತ" ಕಣ್ಣಿಗೆ ಬಿದ್ದರು.
ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿ ಯವರಿಗೆ "ರೈತರ ದಿನ" ದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ. pic.twitter.com/57fhzCNFXV
— S.Suresh Kumar (@nimmasuresh) December 23, 2019
Advertisement
ಜೊತೆಗೆ “ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಈ ‘ಅನ್ನದಾತ’ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿ ಅವರಿಗೆ ‘ರೈತರ ದಿನ’ ದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ” ಎಂದು ಬರೆದುಕೊಂಡಿದ್ದಾರೆ. ಸಚಿವ ಸುರೇಶ್ ಕುಮಾರ್ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.