ಬೆಂಗಳೂರು: ಹೃದಯ ಸ್ತಂಭನದಿಂದ ಆಸ್ಪತ್ರೆ ಸೇರಿದ್ದ ಆಹಾರ, ಅರಣ್ಯ ಸಚಿವ ಉಮೇಶ್ ಕತ್ತಿ(umesh katti) ಅವರು ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಕತ್ತಿ ವಾಪಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.
Advertisement
Advertisement
ಹತ್ತು ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಇದರಿಂದಾಗಿ ಬಾಗಿಲು ಬಡಿದಿದ್ದಾರೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು.
Advertisement
Advertisement
ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್ ಕತ್ತಿ ನಿಧನ
ಹಿಂದೆಯೂ 2 ಬಾರಿ ಹೃದಯಾಘಾತ: ಉಮೇಶ್ ಕತ್ತಿ ಅವರಿಗೆ ಈ ಹಿಂದೆಯೂ 2 ಬಾರಿ ಹೃದಯಾಘಾತವಾಗಿತ್ತು. ಈ ವೇಳೆ ಎರಡು ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರು ಚೇತರಿಸಿಕೊಂಡಿದ್ದರು. ಆದರೆ ಮೂರನೇ ಬಾರಿಯ ಹೃದಯಸ್ತಂಭನ ಅವರ ಜೀವವನ್ನೇ ಪಡೆಯಿತು.
ಸಚಿವರ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(basavaraj bommai), ವಿಪಕ್ಷ ನಾಯಕ ಸಿದ್ದರಾಮಯ್ಯ(siddaramaiah) ಸೇರಿದಂತೆ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ ಬೆಂಗಳೂರಿನಿಂದ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಿದ್ದಾರೆ. ಸಂಕೇಶ್ವರದ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಿದ್ದಾರೆ. ಮಧ್ಯಾಹ್ನ 2 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ನಂತರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರದ ಗೌರವದೊಂದಿಗೆ ಸಂಜೆ 5 ಗಂಟೆಗೆ ಉಮೇಶ್ ಕತ್ತಿ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ