ಬೆಳಗಾವಿ: ಉಮೇಶ್ ಕತ್ತಿ(Umesh Katti) ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.
ನಿಧನರಾದ ವಿಷಯ ತಿಳಿದು ಮಧ್ಯರಾತ್ರಿಯೇ ಕತ್ತಿ ನಿವಾಸದತ್ತ ಹರಿದು ಜನರು ಬರುತ್ತಿದ್ದಾರೆ. ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲೇ ಒಂದಷ್ಟು ಕುಟುಂಬ ಸದಸ್ಯರಿದ್ದಾರೆ. ಇದನ್ನೂ ಓದಿ: 6 ಪಕ್ಷ, 8 ಬಾರಿ ಶಾಸಕ – ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಿಎಂ ಕನಸು ಕಂಡಿದ್ದ ಕತ್ತಿ
Advertisement
Advertisement
ಗಣೇಶ ಚರ್ತುರ್ಥಿ ಹಿನ್ನೆಲೆ ಗ್ರಾಮದಲ್ಲಿ ಹಾಕಿರುವ ವಿದ್ಯುತ್ ದೀಪಾಲಂಕಾರಗಳನ್ನು ತೆರವು ಮಾಡಲಾಗುತ್ತಿದೆ. ಗ್ರಾಮದಲ್ಲಿರುವ ಗಣೇಶ ಮೂರ್ತಿಗಳ ವಿಸರ್ಜನೆಗೆ ಗ್ರಾಮಸ್ಥರು ಚರ್ಚೆ ನಡೆಸಿದ್ದಾರೆ.
Advertisement
ಬೆಂಗಳೂರು ಎಚ್‌ಎಎಲ್‌ನಿಂದ ಹೊರಟ ವಿಶೇಷ ಹೆಲಿಕಾಪ್ಟರ್‌ನಲ್ಲಿ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು 10:30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಉಮೇಶ್ ಕತ್ತಿ ಇನ್ನಿಲ್ಲ – ನಿನ್ನೆ ರಾತ್ರಿ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಏನಾಯ್ತು?
Advertisement
ಕತ್ತಿ ಹುಟ್ಟೂರು 12ಗಂಟೆಗೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಂಜೆ 5ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೇರವೇರಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದ್ದಾರೆ.