ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್ ಕತ್ತಿ ಬೆಂಬಲ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ತಮ್ಮ ಮಗುವಿಗೆ ಭಾರತೀಯ ಖಾದ್ಯದ ಹೆಸರಿಟ್ಟ ವಿದೇಶಿ ದಂಪತಿ
Advertisement
Advertisement
ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
Advertisement
ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಎಲ್ಲ ಲಿಂಗಾಯತ ಶಾಸಕರು ಒಂದಾಗಿ ಸಿಎಂ ಮೇಲೆ ಒತ್ತಡ ತರುತ್ತೇವೆ. ನೀವು ನಿಮ್ಮ ಹೋರಾಟ ಮುಂದುವರಿಸಿ, ಆದಷ್ಟು ಬೇಗ ನಿಮಗೆ ನ್ಯಾಯ ಕೊಡಿಸಿ ಎಲ್ಲರೂ ಸೇರಿಸಿ ವಿಜಯೋತ್ಸವ ಮಾಡೋಣ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಊಟಕ್ಕಿಂತ ಹೆಚ್ಚಾಗಿದ್ಯಂತೆ ಕಾಂಡೋಮ್ ಸೆಲ್ – ಸ್ವಿಗ್ಗಿ ಸಮೀಕ್ಷೆಯಲ್ಲಿನಿದೆ?
Advertisement
ಈ ಸಂದರ್ಭದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯಂಜಯ ಸ್ವಾಮೀಜಿ, ತಾಲೂಕಾ ಅಧ್ಯಕ್ಷ ಗುಂಡು ಪಾಟೀಲ, ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿಯ ಮುಖಂಡರಾದ ವಿನಯ ಪಾಟೀಲ, ರಾಜು ಮುನ್ನೋಳಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಬಿಜೆಪಿ ಮುಖಂಡ ಗುರು ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.