ಚಾಮರಾಜನಗರ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು ಎಂಬ ಹೇಳಿಕೆಯನ್ನು ವಾಪಾಸ್ ಪಡೆಯುವುದಿಲ್ಲ ಎಂದು ಹೇಳುವ ಮೂಲಕ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದಿದ್ದಾರೆ. ರಾಜಕೀಯದ ದುರುದ್ದೇಶದಿಂದ ಈ ರೀತಿ ಹೇಳಿದ್ದಾರೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕಿ.ಜಿ. ಅಕ್ಕಿ ಸಾಕು. ಈ ಹೇಳಿಕಿಗೆ ನಾನು ಈಗಲೂ ಬದ್ಧ, ಇದನ್ನು ಹಿಂಪಡೆಯುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆಜಿ ಅಕ್ಕಿ ಸಾಕು: ಉಮೇಶ್ ಕತ್ತಿ
Advertisement
Advertisement
ಸಿದ್ದರಾಮಯ್ಯ ತಾವು ಮುಖ್ಯಮಂತ್ರಿಯಾದರೆ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂದು ಘೋಷಣೆ ಮಾಡುತ್ತಿದ್ದಾರೆ. ಇದನ್ನು ಸಿಎಂ ಆದ ಬಳಿಕ ಕೊಡುತ್ತಾರೆ. ಆದರೆ ಈ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದಾಗ ಯಾಕೆ ಕೊಡಲಿಲ್ಲ. ಮೊದಲು ಪ್ರತಿಯೊಬ್ಬರಿಗೆ ತಿಂಗಳಿಗೆ 5 ಕೆ.ಜಿ. ನೀಡಿದರು, ಬಳಿಕ 7 ಕೆ.ಜಿ.ಗೆ ಹೆಚ್ಚಿಸಿದರು. ಇದಾದ ನಂತರ ಮತ್ತೆ ಒಂದು ಕೆ.ಜಿ.ಅಕ್ಕಿಯನ್ನು ಕಡಿಮೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
Advertisement
ಉಮೇಶ್ ಕತ್ತಿ ಹೇಳಿದ್ದೇನು?
ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು, ಅದನ್ನು ನಾವು ಆಹಾರ ಭದ್ರತೆಯಡಿ 4.1 ಕೋಟಿ ಫಲಾನುಭವಿಗಳಿಗೆ ವಿತರಿಸುತ್ತಿದ್ದೇವೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ 5 ಕೆ.ಜಿ. ಅಕ್ಕಿ ಸಾಕು. ಆದರೆ ರಾಜಕೀಯ ಕಾರಣದಿಂದ ಸಿದ್ದರಾಮಯ್ಯ 10 ಕೆ.ಜಿ. ಅಕ್ಕಿ ಕೊಡುತ್ತೇನೆ ಎನ್ನುತ್ತಿದ್ದಾರೆ ಅಷ್ಟೇ ಎಂದು ಸಿದ್ದರಾಮಯ್ಯ ವಿರುದ್ಧ ಬಂಡೀಪುರದಲ್ಲಿ ಗುರುವಾರ ಹರಿಹಾಯ್ದಿದ್ದರು.
ಪಡಿತರದಾರರ ಇ ಕೆವೈಸಿ ಶೇ.70 ಮುಗಿದಿದ್ದು, ಅನರ್ಹ ಪಡಿತರದಾರರನ್ನು ಕೈ ಬಿಡುವ ಉದ್ದೇಶದಿಂದ ಕಾರ್ಯಕ್ರಮ ನಡೆಯುತ್ತಿದೆ. ಇ ಕೆವೈಸಿ ಪ್ರಕ್ರಿಯೆ ಪೂರ್ಣವಾದ ಬಳಿಕ ಎಷ್ಟು ಪಡಿತರ ಉಳಿತಾಯ ಆಗಲಿದೆ ಎಂಬುದು ಗೊತ್ತಾಗಲಿದೆ ಎಂದು ಹೇಳಿದ್ದರು.