ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ 15 ಕೋಟಿ ರೂಪಾಯಿ ಅನುದಾನವನ್ನು ಮಂಗಳೂರಿನ ಕಸಾಯಿಖಾನೆಗೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮರ್ಥನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದ್ದಾಗಿದೆ. ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರ ಬಿಜೆಪಿಯವರಿಗೂ ಗೊತ್ತಿದೆ. ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ. ಹೀಗಾಗಿ ಘನ ತಾಜ್ಯ ನಿಯಂತ್ರಣ ಬರಬೇಕಾದರೆ ಕಸಾಯಿಖಾನೆಯ ಅಭಿವೃದ್ಧಿ ಆಗಬೇಕಿದೆ. ಬಿಜೆಪಿಯವರು ಈ ವಿಚಾರದಲ್ಲಿ ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರಕ್ಕೆ ಪತ್ರ ಬರೆದು ಅನುದಾನ ನಿಲ್ಲಿಸಲಿ ಅಂತ ಯುಟಿ ಖಾದರ್ ಸವಾಲು ಹಾಕಿದ್ದಾರೆ. ಇದನ್ನು ಓದಿ: ಸ್ಮಾರ್ಟ್ ಸಿಟಿಯ 15 ಕೋಟಿ ರೂ. ಕಸಾಯಿಖಾನೆಗೆ ನೀಡಿದ್ರು ಸಚಿವ ಖಾದರ್!
Advertisement
Advertisement
ಮಂಗಳೂರಿನ ಸ್ವಚ್ಛತೆಗೆ ಕಸಾಯಿಖಾನೆಗೆ 15 ಕೋಟಿ ರೂ ನೀಡಲಾಗಿದೆ. ಕಸಾಯಿಖಾನೆಯಲ್ಲಿ ಡಾಕ್ಟರ್‍ಗಳಿಗೆ ಕೂರುವ ವ್ಯವಸ್ಥೆ ಇಲ್ಲ. ಘನತಾಜ್ಯದ ವಿಲೇವಾರಿಗೆ ವ್ಯವಸ್ಥೆ ಇರಲಿಲ್ಲ. ಹೀಗಾಗಿ 15 ಕೋಟಿ ರೂಪಾಯಿ ನೀಡಲಾಗಿದೆ. ಬಿಜೆಪಿಯವರಿಗೆ ಆಡಳಿತದ ಅನುಭವ ಕಡಿಮೆ ಇದೆ ಎಂದು ತಿರುಗೇಟು ನೀಡಿದರು.
Advertisement
ಈ ವಿಚಾರವಾಗಿ ಬೋರ್ಡ್ ಮೀಟಿಂಗ್ ನಲ್ಲಿ ತೀರ್ಮಾನಿಸಿ ನಿರ್ಧಾರ ಮಾಡಲಾಗಿದೆ. ಬೋರ್ಡ್ ಮೀಟಿಂಗ್ ನಲ್ಲಿ ಬಿಜೆಪಿಯವರೂ ಇದ್ದಾರೆ. ಮೀಟಿಂಗ್ ನಲ್ಲಿ ಯಾಕೆ ಬಿಜೆಪಿಯವರು ಚಕಾರ ಎತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿದೆ. ಬಿಜೆಪಿಯವರು ಬೇಕಿದ್ದರೆ ಪ್ರಸ್ತಾವನೆ ನಿಲ್ಲಿಸಲಿ. ಕೇಂದ್ರ ಸರ್ಕಾರಕ್ಕೆ ಅನುದಾನ ಕಡಿತಗೊಳಿಸುವಂತೆ ಪತ್ರ ಬರೆಯಿರಿ. ವಿರುದ್ಧ ಮಾತನಾಡಿದ ಎಲ್ಲಾ ಬಿಜೆಪಿ ನಾಯಕರು ಪತ್ರ ಬರೆದು ಅನುದಾನ ನಿಲ್ಲಿಸಲಿ. ಗೋಶಾಲೆಗಳಿಗೆ ಅನುದಾನ ನೀಡಲು ಕೇಂದ್ರಕ್ಕೆ ಪತ್ರ ಬರೆಯಲಿ. ಬಿಜೆಪಿಯವರು ಪತ್ರ ಬರೆಯುದಿಲ್ಲ ಎಂದರೆ ಛೀಮಾರಿ ಹಾಕುತ್ತಾರೆ ಎಂದು ಪತ್ರ ಬರೆಯುತ್ತಿಲ್ಲ. ಕೇಂದ್ರ ಅನುದಾನ ಕೊಟ್ಟರೆ ಗೋಶಾಲೆಗೆ ಎರಡು ಪಟ್ಟು ಜಾಸ್ತಿ ಹಣ ನೀಡುತ್ತೇವೆ ಎಂದರು. ಇದನ್ನು ಓದಿ: ಸಚಿವ ಖಾದರ್‌ಗೆ ಸ್ಮಾರ್ಟ್ ಸಿಟಿಗಿಂತ ಕಸಾಯಿಖಾನೆಯೇ ಮುಖ್ಯ: ಸುನೀಲ್ ಕುಮಾರ್
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv