– ಸಿದ್ದು ಘನತೆಗೆ ಇದು ಒಳ್ಳೆಯದಲ್ಲ
ಮೈಸೂರು: ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣ ಬಗ್ಗೆ ವರುಣಾ (Varuna) ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ (V.Somanna) ಪ್ರತಿಕ್ರಿಯಿಸಿ ಬೇಸರ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ.
Advertisement
‘ಕೈ’ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ವಿ.ಸೋಮಣ್ಣ ಅವರು ಆಸ್ಪತ್ರೆಗೆ ತೆರಳಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ರಣಾಂಗಣವಾದ ವರುಣಾ ಕಣ; ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ
Advertisement
Advertisement
ಸಿದ್ದರಾಮಯ್ಯ ಅವರ ಅಣ್ಣನ ಮನೆ ಮುಂದೆಯೇ ಈ ಗಲಾಟೆ ನಡೆಯಿತು. ಹತಾಶೆ ಮನೋಭಾವ ಹಾಗೂ ಸೋಲಿನ ಭಯದಿಂದ ಈ ಕೆಲಸ ಮಾಡಿದ್ದಾರೆ. ನಾನು ಎಲ್ಲಿ ಹೋಗ್ತಿನೋ ಅಲ್ಲಿಗೆ ಕೆಲವರು ಬರುತ್ತಾರೆ. ಎಲ್ಲಾ ಕೋಮಿನ ಜನ ಪ್ರೀತಿ ಮಾಡುತ್ತಾರೆ. ಒಂದು ಕೋಮಿನ ಜನ ಮಾತ್ರ ದ್ವೇಷ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.
Advertisement
ನಮ್ಮ ಕಾರ್ಯಕರ್ತನಿಗೆ ಆದ ನೋವು ಸಿದ್ದರಾಮಯ್ಯರ ಅಣ್ಣನ ಮಗನಿಗೆ ಆಗಿದ್ದರೆ ನನ್ನನ್ನು ಯಾವ ದೃಷ್ಟಿಯಲ್ಲಿ ಸಿದ್ದರಾಮಯ್ಯ ನೋಡ್ತಿದ್ದರು? ಸಿದ್ದರಾಮಯ್ಯ ಘನತೆಗೆ ಇದು ಒಳ್ಳೆಯದಲ್ಲ. ನನ್ನನ್ನು ಹೆದರಿಸಲು ಸಾಧ್ಯವಿಲ್ಲ. ನಾನು ಯಾವತ್ತಿಗೂ ವಿಚಲಿತ ಆಗಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಮನೆ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆ..!
ವರುಣಾ ಕ್ಷೇತ್ರದ ಸ್ಥಿತಿ ಬಗ್ಗೆ ಚುನಾವಣಾ ಆಯುಕ್ತರಿಗೆ ಪತ್ರ ಬರೆಯುತ್ತೇನೆ. ನಿನ್ನೆಯ ಘಟನೆ ವಿಚಾರದಲ್ಲಿ ಪೊಲೀಸರು ಕೂಡ ಕುತಂತ್ರ ಮಾಡಿದರು ಎಂದು ಆರೋಪಿಸಿದ್ದಾರೆ.