ಚಾಮರಾಜನಗರ: ಸಚಿವ ವಿ. ಸೋಮಣ್ಣ (V Somanna) ಅವರು ಮಹಿಳೆಯೊಬ್ಬರಿಗೆ ಕಪಾಳಮೋಕ್ಷ (Slap) ಮಾಡಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.
ಈ ಬಗ್ಗೆ ಮಹಿಳೆ ಕೆಂಪಮ್ಮ ಸ್ಪಷ್ಟನೆ ನಿಡಿದ್ದು, ಸಚಿವರು ನನಗೆ ಹೊಡೆದಿಲ್ಲ. ಅವರ ಮೇಲೆ ತಪ್ಪು ಅಪವಾದ ಹೊರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Advertisement
Advertisement
ನನಗೂ ಸೈಟ್ ಕೊಡಿ ಎಂದು ಕಾಲಿಗೆಬಿದ್ದೆ. ಆಗ ಸಚಿವರು ನನ್ನನ್ನು ಎತ್ತಿ ಕ್ಷಮೆ ಕೇಳಿ ಸಮಾಧಾನಪಡಿಸಿದರು. ಸಚಿವರು ನನಗೆ ಹೊಡೆಯಲಿಲ್ಲ. ಆದರೆ ಅವರು ನನಗೆ ಹೊಡೆದರು ಎಂದು ಅವರ ಮೇಲೆ ತಪ್ಪು ಅಪವಾದ ಹೊರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ
Advertisement
Advertisement
ಸೈಟಿಗೆಂದು ಕೊಟ್ಟಿದ್ದ ನಾಲ್ಕು ಸಾವಿರ ರೂಪಾಯಿಯನ್ನು ವಾಪಸ್ ಕೊಡಿಸಿದ್ದಾರೆ. ಪುಣ್ಯಾತ್ಮ ನನಗೆ ಸೈಟ್ ಕೊಡಿಸಿ ನನ್ನ ಮಕ್ಕಳಿಗೆ ದಾರಿ ತೋರಿಸಿ ಒಳ್ಳೆಯದು ಮಾಡಿದ್ದಾರೆ. ಹೀಗಾಗಿ ನಾನು ಅವರ ಫೋಟೋ ಇಟ್ಕೊಂಡು ಪೂಜೆ ಮಾಡ್ತೀನಿ ಎಂದು ಕೆಂಪಮ್ಮ ಹೇಳಿದ್ದಾರೆ.
ಏನಿದು ಪ್ರಕರಣ..?: ಶನಿವಾರ ಹಂಗಳ ಗ್ರಾಮದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಿಗದಿಯಾಗಿತ್ತು. ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.30ಕ್ಕೆ ಆಗಮಿಸಿದರು. ಈ ವೇಳೆ ನಿವೇಶನದ ಹಕ್ಕುಪತ್ರ ಪಡೆಯಲು ನೂಕುನುಗ್ಗಲು ಉಂಟಾಯಿತು.
ಇದೇ ವೇಳೆ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಿಕೊಳ್ಳಲು ಸಚಿವರ ಬಳಿ ತೆರಳಿದರು. ಸಮಸ್ಯೆ ಹೇಳಿಕೊಳ್ಳಲು ತೆರಳಿದ ಮಹಿಳೆಗೆ ಸೋಮಣ್ಣ ಅವರು ಕಪಾಳಮೋಕ್ಷ ಮಾಡಿದರು. ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ನಂತರ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದರು.