ಮೈಸೂರು: ಆಷಾಢ (Ashada Masa) ಶುಕ್ರವಾರದ ಸಂಭ್ರಮ ಮೈಸೂರಲ್ಲಿ ಮನೆ ಮಾಡಿದ್ದು, ಚಾಮುಂಡಿ ಬೆಟ್ಟದಲ್ಲಿ (Chamundi Hill) ಮೊದಲ ವಾರದ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದೆ. ಚಾಮುಂಡಿ ತಾಯಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಬಂದಿದ್ದು, ನೂಕು ನುಗ್ಗಲಾಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಆಷಾಢ ಶುಕ್ರವಾರದ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆಗೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕೈಗೊಂಡಿರುವ ಸಕಲ ಸಿದ್ಧತೆಗಳು ಹಾಗೂ ವ್ಯವಸ್ಥೆಗಳನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಸಂದರ್ಭದಲ್ಲಿ ಭಕ್ತರ ಸುಗಮ ದರ್ಶನ, ಸಂಚಾರ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ವೈದ್ಯಕೀಯ… pic.twitter.com/QZJkCcD7Ml
— Dr Yathindra Siddaramaiah (@Dr_Yathindra_S) July 17, 2026
ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರು ಸಹ ವಿವಿಧ ಸೌಲಭ್ಯಗಳು ಹಾಗೂ ಸಂಚಾರ ವ್ಯವಸ್ಥೆಯ ಕಾರ್ಯ ಕ್ಷಮತೆಯನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಬೈಕ್ ಸ್ಕಿಡ್ ಆಗಿ ಅಪಘಾತ – 15 ದಿನಗಳ ಹಿಂದಷ್ಟೇ ಮದ್ವೆಯಾಗಿದ್ದ ನವವಿವಾಹಿತೆ ಸಾವು
ಆಷಾಢ ಶುಕ್ರವಾರದ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕಲ್ಪಿಸಲಾಗಿರುವ ವಿವಿಧ ಸೌಲಭ್ಯಗಳು ಹಾಗೂ ಸಂಚಾರ ವ್ಯವಸ್ಥೆಯ ಕಾರ್ಯ ಕ್ಷಮತೆಯನ್ನು ಪರಿಶೀಲಿಸುವ ಉದ್ದೇಶದಿಂದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ವಾಹನವನ್ನ ಬಳಸದೇ ಸಾರ್ವಜನಿಕರೊಂದಿಗೆ ಬಸ್‌ನಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರಯಾಣಿಸಿದರು. ಇದನ್ನೂ ಓದಿ: ಚಾಮುಂಡೇಶ್ವರಿಗೆ ಸೀರೆ ಕೊಟ್ಟು ಹರಕೆ ತೀರಿಸಿದ ಸಿಎಂ ಪತ್ನಿ

ಪ್ರಯಾಣದ ವೇಳೆ ಭಕ್ತರೊಂದಿಗೆ ಸಂವಾದ ನಡೆಸಿದ ಸಚಿವರು, ಬಸ್ ಸೇವೆ, ಸಂಚಾರ ವ್ಯವಸ್ಥೆ ಹಾಗೂ ಬೆಟ್ಟದಲ್ಲಿ ಕಲ್ಪಿಸಲಾಗಿರುವ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ಪಡೆದು, ವಿವಿಧ ವ್ಯವಸ್ಥೆಗಳ ಪರಿವೀಕ್ಷಣೆ ನಡೆಸಿದರು. ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಾಹನ ದಟ್ಟಣೆ ನಿಯಂತ್ರಿಸಿ ಭಕ್ತರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಾರಿಗೆ ಇಲಾಖೆಯ ವಿಶೇಷ ಬಸ್ ಸೇವೆಯನ್ನು ಬಳಸುವಂತೆ ಮನವಿ ಮಾಡಲಾಗಿದೆ.
