ಬೆಂಗಳೂರು: ಬಾಯಿ ತಪ್ಪಿನಿಂದ ನಾನು ಒಂದು ಪದ ಬಳಸಿದ್ದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹ್ಮದ್ (Zameer Ahmed)) ಹೇಳಿದ್ದಾರೆ.
ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ (Political Judgement) ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್ ಕ್ಷಮೆ ಕೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆ ಅಧಿಕಾರಕ್ಕೆ ಬ್ರೇಕ್
Advertisement
Advertisement
ನಿನ್ನೆ ಹೇಳಿಕೆ ನೀಡುವಾಗ ಒಂದು ಪದ ಬಳಸಿದೆ. ರಾಜಕೀಯ ಮಾಡುತ್ತಾರೆ ಅಂತ ಹೇಳುವ ಬದಲು ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದೆ. ನಾನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಅಂತ ಹೇಳೋಕೆ ಹೋಗಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
Advertisement
ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಜಮೀರ್ ಹೇಳಿಕೆಯ ಬಗ್ಗೆ ಜೋರು ಚರ್ಚೆ ನಡೆದಿದೆ. ಹಿರಿಯ ನಾಯಕರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಜಮೀರ್ ಕ್ಷಮೆ ಕೇಳುವ ಮೂಲಕ ವಿಚಾರವನ್ನು ತಣ್ಣಗೆ ಮಾಡಲು ಮುಂದಾಗಿದ್ದಾರೆ.
Advertisement
ಜಮೀರ್ ಹೇಳಿದ್ದೇನು?
ಬುಧವಾರ ಮಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್ . ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ತಿಳಿಸಿದ್ದರು.