ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಸಚಿವ ಜಮೀರ್ ಅಹ್ಮದ್ (Zameer Ahmed) ಇಂದು ಲೋಕಾಯುಕ್ತ ವಿಚಾರಣೆಗೆ ಹಾಜರಾಗಬೇಕಿದೆ.
ಇಡಿ ಅಧಿಕಾರಿಗಳು ದಾಳಿ ನಡೆಸಿದ ಬಳಿಕ ತನಿಖೆಯಲ್ಲಿ ಅಕ್ರಮ ಆಸ್ತಿ ಪತ್ತೆಯಾಗಿತ್ತು. ತನಿಖೆ ಆರಂಭಿಸಿ ಮನೆಯ ಮೇಲೆ ದಾಳಿ ನಡೆಸಿದ ಅಂದಿನ ಎಸಿಬಿ ಕೆಲ ದಾಖಲಾತಿ ವಶಕ್ಕೆ ಪಡೆದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಇದನ್ನೂ ಓದಿ: We Have An Agreement – ಸಿಎಂ ಹುದ್ದೆ ಒಪ್ಪಂದದ ಬಗ್ಗೆ ಡಿಕೆಶಿ ಮೌನ ಮುರಿದ್ರಾ?
ಕಳೆದ ನಾಲ್ಕು ನೋಟಿಸ್‌ಗಳು ಇದ್ದರೂ ವಿಚಾರಣೆಗೆ ಹಾಜರಾಗದ ಜಮೀರ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಅನ್ನೋ ಕುತೂಹಲ ಇದೆ.
ಇಂದೂ ವಿಚಾರಣೆಗೆ ಹಾಜರಾಗದೇ ಇದ್ದರೆ ಲೋಕಾಯುಕ್ತ ಮತ್ತೊಂದು ನೋಟಿಸ್ ನೀಡಲಿದೆ. ಇದನ್ನೂ ಓದಿ: ಪಕ್ಷದಿಂದ ಯತ್ನಾಳ್ ಉಚ್ಚಾಟಿಸಿ – ಬಿಜೆಪಿ ಜಿಲ್ಲಾಧ್ಯಕ್ಷರ ಸಭೆಯಲ್ಲಿ ನಿರ್ಣಯ