ನುಡಿದಂತೆ ನಡೆವ ಪಕ್ಷ ಕಾಂಗ್ರೆಸ್: ಜಮೀರ್

Public TV
2 Min Read
zameer gruhalakshmi

– ಚಾಮರಾಜಪೇಟೆಯಲ್ಲಿ ಗೃಹಲಕ್ಷ್ಮಿಗೆ ಚಾಲನೆ

ಬೆಂಗಳೂರು: ಕಾಂಗ್ರೆಸ್ (Congress) ಪಕ್ಷ ನುಡಿದಂತೆ ನಡೆದು ಜನರ ಬಳಿ ಮತ ಕೇಳುತ್ತದೆ. ಬಿಜೆಪಿ ದ್ವೇಷದ ಭಾವನೆ ಮೂಡಿಸಿ ಮತ ಕೇಳುತ್ತದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ (Zameer Ahmed) ತಿಳಿಸಿದರು.

ಚಾಮರಾಜಪೇಟೆ ಕಸ್ತೂರಿ ನಗರದ ಬಿಬಿಎಂಪಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ್ದು ಅಭಿವೃದ್ಧಿ ಮಂತ್ರ, ಬಿಜೆಪಿ ಅವರದು ದ್ವೇಷದ ತಂತ್ರ ಎಂದು ಹೇಳಿದರು. ಇದನ್ನೂ ಓದಿ: ʻಗೃಹಲಕ್ಷ್ಮಿʼ ಯೋಜನೆಗೆ ಅದ್ಧೂರಿ ಚಾಲನೆ – ನುಡಿದಂತೆ ನಡೆದಿದ್ದೇವೆ, ಕರ್ನಾಟಕ ದಿವಾಳಿಯಾಗಿಲ್ಲ ಮೋದಿಯವರೇ: ಸಿಎಂ

zameer gruhalakshmi1

ಕಾಂಗ್ರೆಸ್ ಪಕ್ಷವು ಚುನಾವಣೆ ಸಮಯದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಪೈಕಿ ನಾಲ್ಕು ಈಡೇರಿಸಿದೆ. ಇಂದು ಗೃಹಲಕ್ಷ್ಮಿ 1.28 ಕೋಟಿ ಮನೆ ಯಜಮಾನಿಯರ ಖಾತೆಗೆ ತಲಾ ಎರಡು ಸಾವಿರ ಜಮೆ ಆಗಿದೆ. ಇಷ್ಟು ಕುಟುಂಬಗಳು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ರಾಹುಲ್ ಗಾಂಧಿ ಮಾರ್ಗದರ್ಶನದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಮ್ಮ ಸರ್ಕಾರ ಮುನ್ನಡೆಯುತ್ತಿದೆ. ಗೃಹಜ್ಯೋತಿಯಡಿ 1.42 ಕೋಟಿ ಕುಟುಂಬಗಳಿಗೆ ಅನುಕೂಲ ಆಗಿದೆ. ಶಕ್ತಿ ಯೋಜನೆಯಡಿ 48 ಕೋಟಿ ಮಹಿಳೆಯರು 1,000 ಕೋಟಿ ರೂ. ಮೊತ್ತದಷ್ಟು ಉಚಿತ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 1.20 ಕೋಟಿ ಕುಟುಂಬಕ್ಕೆ ಐದು ಕೆಜಿ ಅಕ್ಕಿ ಮೊತ್ತ ಜಮೆ ಮಾಡಿದ್ದೇವೆ. ಮತ್ತೊಂದು ಗ್ಯಾರಂಟಿ ಶೀಘ್ರವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಾವು ಯಾವತ್ತೂ ನಿಮಗೆ ಸುಳ್ಳು ಹೇಳಲ್ಲ, ಸುಳ್ಳು ಆಶ್ವಾಸನೆ ಕೊಡಲ್ಲ: ರಾಹುಲ್ ಗಾಂಧಿ

ಕಾಂಗ್ರೆಸ್ ಸರ್ಕಾರ ಎಂದರೆ ಬಡವರ ಪರ ಸರ್ಕಾರ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬಡವರ ಪರ ಯೋಜನೆ ರೂಪಿಸಿ ಕೆಲಸ ಮಾಡಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಇದು ನಮ್ಮ ಬದ್ಧತೆ ಎಂದು ತಿಳಿಸಿದರು. ಮುಖಂಡರಾದ ಅಲ್ತಾಫ್ ಖಾನ್, ಡಿ.ಸಿ. ರಮೇಶ್, ಸುಜಾತ ರಮೇಶ್, ಸರ್ವರ್, ಗೌಸಿ, ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article