ಬಳ್ಳಾರಿ: ಸಿದ್ದರಾಮಯ್ಯ (Siddaramaiah) ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್ ಮಾಡಿದ್ದಾರೆ.
Advertisement
ಪವರ್ ಫೈಟ್ ಬಗ್ಗೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ (DK Shivakumar) ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀ ಸಾಯಿ ಮಿನರಲ್ಸ್ ಗಣಿಗಾರಿಕೆ ಅಕ್ರಮ ಕೇಸ್ – ಹೆಚ್‌ಡಿಕೆ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ SIT
Advertisement
Advertisement
ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು
Advertisement
ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದ್ರೆ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 43 ಕೋಟಿ ಕೊಟ್ರೆ ಅಮೆರಿಕದ ʻಗೋಲ್ಡ್ ಕಾರ್ಡ್ʼ – ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗೆ ಟ್ರಂಪ್ ಆಫರ್