Wednesday, 22nd May 2019

ಕಾಂಗ್ರೆಸ್-ಜೆಡಿಎಸ್ ರಿಜಿಸ್ಟರ್ ಮದ್ವೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ: ಜಮೀರ್ ಅಹ್ಮದ್

ಹಾಸನ: ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಈಗ ರಿಜಿಸ್ಟರ್ ಮದುವೆ ಆಗಿದೆ. ಈ ಮದುವೆಯನ್ನು ಮುರಿಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಸ್ಥಳೀಯ ಚುನಾವಣೆಗಳ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಆಗುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರೇನು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿ, ನಾನು ಸಿಎಂ ಆಗಬೇಕು ಅಂತಾ ಹೇಳಿದ್ದಾರಾ ಇಲ್ಲವಲ್ಲ ಎಂದು ಹೇಳಿ ಗರಂ ಆಗಿ ಉತ್ತರಿಸಿದರು.

ಕೊಡಗಿನಲ್ಲಿ ಸಾವಿರಕ್ಕಿಂತಲೂ ಹೆಚ್ಚು ಮನೆಗಳು ಹಾನಿಯಾಗಿವೆ. ಸದ್ಯ ನಿರಾಶ್ರಿತ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಬಾಡಿಗೆ ಮನೆ ವ್ಯವಸ್ಥೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

Leave a Reply

Your email address will not be published. Required fields are marked *