ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ (Zameer Ahmed) ವಿರುದ್ಧ ಜೆಡಿಎಸ್ (JDS) ಕಿಡಿಕಾರಿದೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಜಮೀರ್ ಅಹ್ಮದ್ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ – 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ
Advertisement
ಟ್ವೀಟ್‌ನಲ್ಲಿ ಏನಿದೆ?
ಜಮೀರ್ ಅಹ್ಮದ್ ಅವರೇ, ಹೆಚ್.ಡಿ ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ.
Advertisement
ಜಮೀರ್ ಅಹ್ಮದ್ ಅವರೇ,
ಹೆಚ್.ಡಿ. ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ.
ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ…
— Janata Dal Secular (@JanataDal_S) November 12, 2024
Advertisement
ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ, ಇಲ್ಲಿ ನಿಮ್ಮ ಒಡೆದು ಆಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಭೇದ ಹೇಳಿಕೆಗಳನ್ನು ನೀಡಿ ಅಪಮಾನ ಎಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆ: ತೆರಿಗೆ ಇಲಾಖೆಯಿಂದ 5 ಲಕ್ಷ ಮೌಲ್ಯದ ವಸ್ತುಗಳು ವಶ