ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವೂ ಕಾಂಗ್ರೆಸ್‌ನಲ್ಲಿ ಭರ್ಜರಿ ರಾಜಕೀಯ ಚಟುವಟಿಕೆ ನಡೆದಿದೆ. ಸಂಪುಟದ ಕೆಲ ಸಚಿವರು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಸಚಿವರಾದ ಎಂ.ಬಿ.ಪಾಟೀಲ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ ಅವರು ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದಾರೆ. ಇದನ್ನೂ ಓದಿ: ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಸಹೋದರ ಶೀಘ್ರ ಗುಣಮುಖರಾಗಲಿ: ಸಿ.ಟಿ.ರವಿ ಪ್ರಾರ್ಥನೆ
ಶಾಸಕಾಂಗ ಸಭೆ ಮುಗಿದ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಆಪ್ತ ಸಚಿವರು ಆಗಮಿಸಿ ಚರ್ಚೆ ನಡೆಸಿದ್ದಾರೆ. ನಿನ್ನೆ ತಡರಾತ್ರಿ ವರೆಗೂ ಶಾಸಕಾಂಗ ಸಭೆ ನಡೆಸಲಾಗಿತ್ತು. ಸಭೆ ಬಳಿಕವೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರನ್ನು ಸಿಎಂ, ಡಿಸಿಎಂ ಭೇಟಿಯಾಗಿದ್ದರು.
ಸುರ್ಜೇವಾಲಾ ಜೊತೆಗೆ ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಇದೀಗ ಸಿದ್ದರಾಮಯ್ಯ ನಿವಾಸಕ್ಕೆ ಸಿದ್ದರಾಮಯ್ಯ ಆಪ್ತಬಳಗದ ಸಚಿವರು ಆಗಮಿಸಿ ಮಾತುಕತೆ ನಡೆಸಿದ್ದಾರೆ.