ನವದೆಹಲಿ: ವಕ್ಫ್ ಕಾನೂನಿನಿಂದಾಗಿ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ಹಿಂಸಾಚಾರದ ಕುರಿತು ಬಾಂಗ್ಲಾದೇಶ (Bangladesh) ನೀಡಿದ ಹೇಳಿಕೆಗಳನ್ನು ಭಾರತ ಬಲವಾಗಿ ಖಂಡಿಸಿದೆ. ಇಂತಹ ಕಪಟ ಹೇಳಿಕೆಗಳ ಮೂಲಕ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ಕಿರುಕುಳದ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನದ ಭಾಗ ಎಂದು ಭಾರತದ ವಿದೇಶಾಂಗ ಸಚಿವಾಲಯ (Ministry of External Affairs) ತಿರುಗೇಟು ನೀಡಿದೆ.
ಕಳೆದ ವಾರ ಬಂಗಾಳದ ಮುರ್ಷಿದಾಬಾದ್ (Murshidabad) ಜಿಲ್ಲೆಯಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿದ್ದರು. ಈ ಹಿಂಸಾಚಾರದಲ್ಲಿ ಪರಿಣಾಮ ಬೀರಿದ ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯಗಳನ್ನು ರಕ್ಷಿಸುವಂತೆ ಭಾರತೀಯ ಅಧಿಕಾರಿಗಳಿಗೆ ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರ ಪತ್ರಿಕಾ ಕಾರ್ಯದರ್ಶಿ ಕರೆ ನೀಡಿದರು. ಇದನ್ನೂ ಓದಿ: ಫ್ಲೋರಿಡಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಗುಂಡಿನ ದಾಳಿಗೆ ಇಬ್ಬರು ಬಲಿ – ಐವರಿಗೆ ಗಾಯ
ಬಾಂಗ್ಲಾದೇಶದ ಹೇಳಿಕೆಗಳನ್ನು ತಿರಸ್ಕರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಕಡೆಯವರು ಮಾಡಿದ ಹೇಳಿಕೆಗಳನ್ನು ನಾವು ತಿರಸ್ಕರಿಸುತ್ತೇವೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಕಿರುಕುಳದ ಬಗ್ಗೆ ಭಾರತದ ಕಳವಳಗಳಿಗೆ ಸಮಾನಾಂತರವಾಗಿ ಚಿತ್ರಿಸಲು ಇದು ಕೇವಲ ವೇಷ ಧರಿಸಿದ ಮತ್ತು ಕಪಟ ಪ್ರಯತ್ನವಾಗಿದೆ. ಅಲ್ಲಿ ಅಂತಹ ಕೃತ್ಯಗಳು ನಡೆಸಿದ ಅಪರಾಧಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಅನಗತ್ಯ ಹೇಳಿಕೆಗಳನ್ನು ನೀಡುವ ಬದಲು ತನ್ನದೇ ಆದ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವತ್ತ ಗಮನಹರಿಸುವಂತೆ ಹೇಳಿದರು. ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ