ನವದೆಹಲಿ: ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ದಾಖಲಾದ ಬಳಿಕ ಇದೀಗ ಕೇಂದ್ರ ಆರೋಗ್ಯ ಇಲಾಖೆ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ನೂತನ ಗೈಡ್‍ಲೈನ್ ಬಿಡುಗಡೆ ಮಾಡಿದೆ.
Advertisement
ವಿದೇಶದಿಂದ ಆಗಮಿಸಿದ್ದ ಕೇರಳದ ಕೊಲ್ಲಂನ ವ್ಯಕ್ತಿಯೋರ್ವನಿಗೆ ನಿನ್ನೆ ಮಂಕಿಪಾಕ್ಸ್ ಸೋಂಕಿರುವುದು ದೃಢವಾಗಿತ್ತು. ಆ ಬಳಿಕ ಇದೀಗ ವಿದೇಶದಿಂದ ವಿಮಾನದಲ್ಲಿ ಆಗಮಿಸುವ ಪ್ರಯಾಣಿಕರ ಮೇಲೆ ಕೇಂದ್ರ ಆರೋಗ್ಯ ಇಲಾಖೆ ನಿಗಾ ವಹಿಸಲು ಮುಂದಾಗಿದೆ. ಇದನ್ನೂ ಓದಿ: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು
Advertisement
ಹೊಸ ಗೈಡ್‍ಲೈನ್:
ಅಂತಾರಾಷ್ಟ್ರೀಯ ಪ್ರಯಾಣಿಕರು ಅನಾರೋಗ್ಯವಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರಬಾರದು. ಇಲಿಗಳು, ಅಳಿಲುಗಳು, ಮಂಗಗಳು ಮತ್ತು ಸಸ್ತನಿಗಳು ಸೇರಿದಂತೆ ಸತ್ತ ಅಥವಾ ಜೀವಂತ ಕಾಡು ಪ್ರಾಣಿಗಳ ಸಂಪರ್ಕದಿಂದ ದೂರವಿರಬೇಕು. ಕಾಡು ಪ್ರಾಣಿಗಳ ಮಾಂಸವನ್ನು ತಿನ್ನಬಾರದು. ಆಫ್ರಿಕಾ ಸೇರಿದಂತೆ ಇತರ ದೇಶಗಳಲ್ಲಿ ಕಾಡು ಪ್ರಾಣಿಗಳಿಂದ ಉತ್ಪಾದಿಸಿದ ಉತ್ಪನ್ನಗಳಾದ ಕ್ರೀಮ್ ಲೋಷನ್‍ಗಳನ್ನು ಬಳಸಬಾರದು ಮತ್ತು ತರಬಾರದೆಂದು ಗೈಡ್‍ಲೈನ್‍ನಲ್ಲಿ ಸ್ಪಷ್ಟಪಡಿಸಲಾಗಿದೆ.
Advertisement
Advertisement
ಜೊತೆಗೆ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಗೆ ತೆರಳಿ ಔಷಧಿ ಪಡೆಯಿರಿ ಮತ್ತು ಈ ಬಗ್ಗೆ ಸರಿಯಾಗಿ ಮಾಹಿತಿ ನೀಡಿ. ಜೊತೆಗೆ ಸೋಂಕಿತರೊಂದಿಗೆ ಸಂಪರ್ಕಿಸಿದವರ ಬಗ್ಗೆ ಮಾಹಿತಿ ನೀಡಿ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗರ್ಭಪಾತ ಬೇಡ, ಮಗುವಿಗೆ ಜನ್ಮ ನೀಡಿ ದತ್ತು ಕೊಡಿ – ಅವಿವಾಹಿತ ಯುವತಿಗೆ ದೆಹಲಿ ಹೈಕೋರ್ಟ್ ಸಲಹೆ
Ministry of Health and Family Welfare releases guidelines for the management of Monkeypox disease
As per the ministry's guidelines, international passengers should avoid close contact with sick people, contact with dead or live wild animals and others. pic.twitter.com/44ndGll6J3
— ANI (@ANI) July 15, 2022
ವಿಶ್ವ ಆರೋಗ್ಯ ಸಂಸ್ಥೆ (WTC) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ. 1970ರಲ್ಲಿ ಮೊದಲ ಬಾರಿಗೆ ಕಾಂಗೋ ದೇಶದಲ್ಲಿ ಮಾನವನಲ್ಲಿ ಪತ್ತೆಯಾಯಿತು. ಈ ರೋಗ ಹೆಚ್ಚಾಗಿ ಆಫ್ರಿಕಾದಲ್ಲಿ ವಾಸಿಸುವವರಲ್ಲಿ ಕಂಡು ಬಂದಿದೆ. ಮಂಕಿಪಾಕ್ಸ್ ವೈರಸ್ ಇಲಿಗಳಲ್ಲಿ ಮತ್ತು ಕೋತಿಗಳಲ್ಲಿ ಹರಡುವುದು ಸಾಮಾನ್ಯ. ಸೋಂಕಾದ ಪ್ರಾಣಿಗಳು ಮನುಷ್ಯನ ಸಂಪರ್ಕ ಪಡೆದಾಗ ಅವರಿಗೂ ಹರಡುವ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಕೆ ನೀಡಿದೆ.