ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಕ್ಯಾಬಿನೆಟ್ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಇಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ – ಅಂತ್ಯಸಂಸ್ಕಾರಕ್ಕೂ ಮುನ್ನ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ
Advertisement
Advertisement
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ಸಭೆಯಲ್ಲಿ ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು.
Advertisement
ಅದರಂತೆ ಸ್ಮಾರಕಕ್ಕೆ ಸ್ಥಳ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: ಮನಮೋಹನ್ ಸಿಂಗ್ ನನ್ನ ಸ್ನೇಹಿತ, ತತ್ವಜ್ಞಾನಿ, ಮಾರ್ಗದರ್ಶಕ – ಸೋನಿಯಾ ಗಾಂಧಿ ಬಣ್ಣನೆ
Advertisement
ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ ಘಾಟ್‌ನಲ್ಲಿ ಬೆಳಗ್ಗೆ 11:45 ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.