LatestMain PostNational

ಬಸ್‍ಗಳ ನಡುವೆ ಡಿಕ್ಕಿ – ಭೀಕರ ಅಪಘಾತದಲ್ಲಿ ಮೂವರು ಸಾವು, 12 ಮಂದಿಗೆ ಗಾಯ

ಶ್ರೀನಗರ: ಎರಡು ಬಸ್‍ಗಳು ಡಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಸಾಂಬಾ (Samba) ಜಿಲ್ಲೆಯ ಜಮ್ಮು-ಪಠಾಣ್‍ಕೋಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Jammu-Pathankot National Highway) ನಡೆದಿದೆ.

ಓವರ್‌ಟೇಕ್ ಮಾಡಲು ಚಾಲಕ ಪ್ರಯತ್ನಿಸುವಾಗ ಅತಿವೇಗದಿಂದ ಅಪಘಾತ ಸಂಭವಿಸಿದೆ. ಗಾಯಗೊಂಡವರಲ್ಲಿ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವೈದ್ಯಾಧಿಕಾರಿ ಡಾ.ಭರತ್ ಭೂಷಣ್ ತಿಳಿಸಿದ್ದಾರೆ.

ಘಟನೆ ಕುರಿತಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ (Lieutenant Governor Manoj Sinha) ಅವರು ಸಂತಾಪ ವ್ಯಕ್ತಪಡಿಸಿದ್ದು, ದೋಡಾ (Doda) ಮತ್ತು ಸಾಂಬಾದಲ್ಲಿ (Samba) ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಸಾವು-ನೋವಿನಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋಗೆ ಹೈಟೆಕ್ ಟಚ್ – ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ಲ್ಯಾನ್

ಈ ಸಂಬಂಧ ಟ್ವೀಟ್ ಮಾಡಿರುವ ಅವರು, “ದೋಡಾ ಮತ್ತು ಸಾಂಬಾದಲ್ಲಿ ಸಂಭವಿಸಿದ ದುರದೃಷ್ಟಕರ ರಸ್ತೆ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗುಜರಾತ್‍ನಲ್ಲಿ ಕಾಂಗ್ರೆಸ್‍ಗೆ ಮತ್ತೆ ಆಘಾತ – ಝಲೋದ್ ಭವೇಶ್ ಕಟಾರಾ ರಾಜೀನಾಮೆ

Live Tv

Leave a Reply

Your email address will not be published. Required fields are marked *

Back to top button