ಭೋಪಾಲ್: 14 ವರ್ಷದ ಅಪ್ರಾಪ್ತ ಹುಡುಗ ಟಿವಿ ನೋಡಲು ಹೋಗಿ 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಡೆದಿದೆ.
ಈ ಘಟನೆ ಉಜ್ಜಿಯನಿಯ ಜಲ್ವಾ ಗ್ರಾಮದಲ್ಲಿ ನಡೆದಿದೆ. ಗುರುವಾರ ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೆ ಟಿವಿ ನೋಡುತ್ತಾ ಕುಳಿತ್ತಿದ್ದಳು. ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು ಹುಡುಗ ಟಿವಿ ನೋಡುವ ನೆಪದಲ್ಲಿ ಬಾಲಕಿಯ ಮನೆಗೆ ಹೋಗಿದ್ದು, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮನೋಹರ್ ಲಾಲ್ ತಿಳಿಸಿದ್ದಾರೆ.
ಮನೆಗೆ ಪೋಷಕರು ಬಂದಾಗ ಬಾಲಕಿ ನಡೆದ ಘಟನೆಯ ಬಗ್ಗೆ ಹೇಳಿದ್ದಾಳೆ. ಬಳಿಕ ಕುಟುಂಬಸ್ಥರು ಘಾಟಿಯಾ ಪೊಲೀಸ್ ಠಾಣೆಯಲ್ಲಿ ಹುಡುಗನ ಬಗ್ಗೆ ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಹುಡುಗನ ಮೇಲೆ ಐಪಿಸಿ ಸೆಕ್ಷನ್ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹುಡುಗನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪಾಟೀಲ್ ಅವರು ಹೇಳಿದ್ದಾರೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಅಪ್ರಾಪ್ತೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಆದ್ದರಿಂದ ಕಳೆದ ವರ್ಷ ಅಪ್ರಾಪ್ತೆ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತಹ ಕಾಯ್ದೆಗೆ ರಾಜ್ಯ ಸರ್ಕಾರ ಮಂಜೂರು ಮಾಡಿದೆ.
ರಾಜ್ಯ ಸರ್ಕಾರ ಜಾರಿ ಮಾಡಿದ ನಂತರ ಕಳೆದ ವರ್ಷ ಮೇ ತಿಂಗಳಿನಲ್ಲಿ 4 ವರ್ಷದ ಬಾಲಕಿಯ ಮೇಲೆ 23 ವರ್ಷದ ಯುವಕನೊಬ್ಬ ಅತ್ಯಾಚಾರ ಎಸಗಿದ್ದನು. ನಂತರ ಪೊಲೀಸರು ಅಪರಾಧಿಯನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಫೆಬ್ರವರಿಯಲ್ಲಿ ಆತನಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv