ಮಡಿಕೇರಿ: ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಕೊಟ್ಟ ತಪ್ಪಿಗೆ ಇಲ್ಲೊಬ್ಬ ಪಿತಾಮಹಾ ಬರೋಬ್ಬರಿ 25 ಸಾವಿರ ರೂ. ದಂಡ ತೆತ್ತಿದ್ದಾನೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣಾ (Somwarpet Police Station) ವ್ಯಾಪ್ತಿಯ ರೇಂಜರ್ ಬ್ಲಾಕಿನ ಬಿ.ಎಸ್ ಮಂಜುನಾಥ ಎಂಬುವವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದರು. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮ್ಮೆ ಸಂಖ್ಯೆ 116/24 ರಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್ ಪಡೆದಿದ್ದ ಅಲ್ಲು ಅರ್ಜುನ್
ಪ್ರಕರಣದ ವಿಚಾರಣೆ ನಡೆಸಿದ ಸೋಮವಾರಪೇಟೆ ಜೆಎಂಎಫ್‌ಸಿ ಕೋರ್ಟ್ (Somwarpet JMFC Court), ಮಂಜುನಾಥ್ ಅವರಿಗೆ 25,000 ರೂ. ದಂಡ ವಿಧಿಸಿದೆ. ಇದರೊಂದಿಗೆ ದ್ವಿಚಕ್ರ ವಾಹನದ ಎಫ್‌ಸಿ ನವೀಕರಿಸದಕ್ಕೆ ಹೆಚ್ಚುಬರಿ 2,000 ರೂ. ಸೇರಿ ಒಟ್ಟು 27,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ