ಜೈಪುರ್: ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದ (Rajasthan) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸಮಂದರ್ ಸಿಂಗ್, ಧರಂಪಾಲ್ ಸಿಂಗ್ ಮತ್ತು ಭಾತಮ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಗಳು ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಕ್ಕೂ ಮುನ್ನ ಆರೋಪಿಗಳು ಬಾಲಕಿಯ ಗೆಳೆಯನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ – ಅಂಡರ್‌ವೇರ್ ಸಹಿತ ಕೊಲೆ ಮಾಡಲು ಬಳಸಿದ್ದ ಬಟ್ಟೆಗಳನ್ನು ಸುಟ್ಟಿದ್ದ ಹಂತಕರು
Advertisement
ಬಾಲಕಿ ಹಾಗೂ ಆಕೆಯ ಗೆಳೆಯ ಶನಿವಾರ ಅಜ್ಮೀರ್‍ನಿಂದ ರಾತ್ರಿ 10:30 ರ ಸುಮಾರಿಗೆ ಬಸ್‍ನಲ್ಲಿ ಜೋಧ್‍ಪುರಕ್ಕೆ ಬಂದಿದ್ದಾರೆ. ಬಳಿಕ ಉಳಿದುಕೊಳ್ಳಲು ರೂಮ್ ಪಡೆಯಲು ಅತಿಥಿ ಗೃಹಕ್ಕೆ ತೆರಳಿದ್ದರು. ಆದರೆ ಅಲ್ಲಿನ ಅತಿಥಿ ಗೃಹದ ಸಿಬ್ಬಂದಿ ಹುಡುಗಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ನಂತರ ಅಲ್ಲಿಂದ ಇಬ್ಬರೂ ತೆರಳಿದ್ದಾರೆ. ಅತಿಥಿ ಗೃಹದ ಹೊರಗೆ ನಿಂತಿದ್ದ ಇಬ್ಬರನ್ನೂ ಮಾತಾಡಿಸಿದ ಆರೋಪಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ಬಳಿಕ ರೈಲ್ವೇ ನಿಲ್ದಾಣಕ್ಕೆ ಕರೆದೊಯ್ಯುತ್ತಿರುವುದಾಗಿ ನಂಬಿಸಿ ಜೆಎನ್‍ವಿಯು ಕ್ಯಾಂಪಸ್ ಬಳಿಯ ಕ್ರೀಡಾಂಗಣಕ್ಕೆ ಕಳುಹಿಸಿದ್ದಾರೆ. ಅಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅತಿಥಿಗೃಹದ ಮೇಲ್ವಿಚಾರಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಬೆಳಗ್ಗಿನ ಜಾವ ಜನ ಮೈದಾನಕ್ಕೆ ಜನ ವಾಕಿಂಗ್‍ಗೆ ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಬಾಲಕಿಯ ಗೆಳೆಯ ವಾಯು ವಿಹಾರಕ್ಕೆ ತೆರಳಿದ್ದವರ ಬಳಿ ಸಹಾಯ ಕೇಳಿದ್ದಾನೆ. ನಂತರ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಬಳಿಕ ಪೊಲೀಸರು ಶ್ವಾನ ದಳ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡವನ್ನು ನಿಯೋಜಿಸಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಆರೋಪಿಗಳನ್ನು ಸಿಸಿಟಿವಿ ದೃಶ್ಯಗಳ ಸಹಾಯದಿಂದ ಜೋಧ್‍ಪುರದ ಗಣೇಶಪುರದ ಮನೆಯೊಂದರಲ್ಲಿ ಅಡಗಿರುವುದನ್ನು ಖಚಿತ ಪಡಿಸಿಕೊಳ್ಳಲಾಯಿತು. ಬಂಧನಕ್ಕೆ ತೆರಳಿದ್ದ ವೇಳೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಬಿದ್ದು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಸದಸ್ಯರಾಗಿದ್ದಾರೆ. ಜೈ ನಾರಾಯಣ ವ್ಯಾಸ್ ವಿಶ್ವವಿದ್ಯಾಲಯದ (ಜೆಎನ್‍ವಿಯು) ವಿದ್ಯಾರ್ಥಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿದ್ಯಾರ್ಥಿ ನಾಯಕನ ಪರವಾಗಿ ಆರೋಪಿಗಳು ಪ್ರಚಾರ ನಡೆಸುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ.
ಬಂಧಿತರ ವಿರುದ್ಧ ಪೋಕ್ಸೋ (POCSO) (ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ – ಪ್ರಯಾಣಿಕರು ಸೇಫ್
Web Stories