ರಾಂಚಿ: ಅಪ್ರಾಪ್ತ ಬಾಲಕಿಯ ತಾಯಿಯ (Mother) ಎದುರೇ ಆಕೆಯನ್ನು ಐದು ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಜಾರ್ಖಂಡ್‌ನ (Jharkhand) ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.
ದಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಹಾಗೂ ಆಕೆಯ ತಾಯಿ ದಿಯೋಘರ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಪಾಲ್ಗೊಂಡಿದ್ದರು. ಅಲ್ಲಿಂದ ಮರಳಿ ಮನೆಗೆ ಬರುತ್ತಿದ್ದಾಗ ಅವರಿದ್ದಲ್ಲಿಗೆ 2 ಬೈಕ್‍ನಲ್ಲಿ (Bike) ಐವರು ಬಂದಿದ್ದಾರೆ. ಅಷ್ಟೇ ಅಲ್ಲದೇ ತಾಯಿ ಹಾಗೂ ಬಾಲಕಿಯು ಹೋಗುತ್ತಿದ್ದ ದಾರಿಯನ್ನು ತಪ್ಪಿಸಿದ್ದಾರೆ.
ನಂತರ ಮಧುಪುರ ಪ್ರದೇಶದಲ್ಲಿ ಬಾಲಕಿಯನ್ನು ಬಲವಂತವಾಗಿ ಪಕ್ಕಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಐವರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ತಾಯಿ ಇದನ್ನು ತಡೆಯಲು ಹೋದಾಗ ಆಕೆಯನ್ನು ಥಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಫುಟ್‌ಪಾತ್ ಮೇಲೆ ಚಲಾಯಿಸಿದ ಚಾಲಕ – ಅಪಘಾತಕ್ಕೆ ನಿವೃತ್ತ ಯೋಧ ಬಲಿ
ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ (Arrest). ಈ ಬಗ್ಗೆ ತನಿಖೆ ನಡೆಸಲು ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಇದನ್ನೂ ಓದಿ: ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಿ- ಉಕ್ರೇನ್‌ನಲ್ಲಿನ ನಾಗರಿಕರಿಗೆ ಭಾರತ ಸಲಹೆ