ರಾಖಿ ಕಟ್ಟಲು ಹೋಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

Public TV
1 Min Read

ಪಾಟ್ನಾ: ರಕ್ಷಾ ಬಂಧನ ಆಚರಿಸಲು ಅಣ್ಣನ ಮನೆಗೆ ಹೋಗುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬಿಹಾರದ ಸಿವಾನ್‍ನಲ್ಲಿ ನಡೆದಿದೆ.

ಬಾಲಕಿಯು ತನ್ನ ಸಹೋದರನಿಗೆ ರಾಖಿ ಕಟ್ಟಲು ಆತನ ಮನೆಗೆ ತೆರಳುತ್ತಿದ್ದಳು. ಈ ವೇಳೆ ನಾಲ್ವರು ಬಂದು ಆಕೆಯನ್ನು ಅಪಹರಿಸಿದ್ದಾರೆ. ನಂತರ ರಸ್ತೆಯ ಬದಿಯಲ್ಲಿರುವ ಪೊದೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

rape

ಬಾಲಕಿಯ ಕಿರುಚಾಟ ಕೇಳಿ ದಾರಿಹೋಕನೊಬ್ಬ ಸ್ಥಳಕ್ಕೆ ಆಗಮಿಸಿದ್ದಾನೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಜೊತೆಗೆ ಆಕೆಗೆ ಗಂಭೀರ ಗಾಯಗಳು ಆಗಿವೆ.

Police Jeep 1

ಘಟನೆ ಸಂಬಂಧಿಸಿ ಪವನ್ ಕುಮಾರ್, ಅಂಕಿತ್ ಕುಮಾರ್, ಇಮಾಮುದ್ದೀನ್ ಮತ್ತು ದಿನೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಎಲ್ಲಾ ಆರೋಪಿಗಳನ್ನು ಬಂಧಿಸಿಲ್ಲ ಎಂದು ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ಟಿಪ್ಪು ಫ್ಲೆಕ್ಸ್ ಹರಿದ ಪ್ರಕರಣ – ಪುನೀತ್ ಕೆರೆಹಳ್ಳಿ ಬಂಧನ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *