ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ನಡೆಸಿ ಬಳಿಕ ಆಕೆ ಏಳು ತಿಂಗಳ ಗರ್ಭಿಣಿಯಾದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಾದ ಸ್ಥಳೀಯ ನಿವಾಸಿ ರವೀಂದ್ರ ಹಾಗೂ ಯೋಗೀಶ್ ನನ್ನು ಬೆಳ್ತಂಗಡಿ ಪೆÇಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈ ಮಾಜಿ ಪೊಲೀಸ್ ಆಯುಕ್ತ ನಾಪತ್ತೆ, ರಷ್ಯಾಗೆ ಪರಾರಿ?
10ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿದ್ದ ಬಾಲಕಿಯನ್ನು ಜೆಸಿಬಿ ಚಾಲಕನಾಗಿದ್ದ ರವೀಂದ್ರ ಐದು ಬಾರಿ ಅತ್ಯಾಚಾರ ನಡೆಸಿದ್ದು, ಬಾಲಕಿಯ ಸಂಬಂಧಿ ಯೋಗೀಶ್ ಎಂಬಾತ ಎರಡು ಬಾರಿ ಅತ್ಯಾಚಾರ ನಡೆಸಿದ್ದಾನೆ. ಇದನ್ನೂ ಓದಿ: 14ನೇ ಐಪಿಎಲ್‍ಗೆ ಗುಡ್‍ಬೈ ಹೇಳಿದ ಗೇಲ್
ಬಾಲಕಿಯ ಶಾಲೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ವೈದ್ಯರು ವಿದ್ಯಾರ್ಥಿಯ ದೇಹಸ್ಥಿತಿ ನೋಡಿ ಅನುಮಾನಗೊಂಡಿದ್ದು, ಬಳಿಕ ಬೆಳ್ತಂಗಡಿ ವೈದ್ಯರಲ್ಲಿ ಪರೀಕ್ಷಿಸಿದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಇದನ್ನೂ ಓದಿ: ನನ್ನ ಮಗಳ ಸಾವಿಗೆ ತೆಲುಗು ನಟ ಕಾರಣ- ಸೌಜನ್ಯ ತಂದೆ ದೂರು