ಮುಂಬೈ: ವಿವಾಹಿತ ಅಪ್ರಾಪ್ತೆ ಯುವತಿ ಮೇಲೆ ಕಳೆದ 6ತಿಂಗಳುಗಳಿಂದ ಪೊಲೀಸರು ಸೇರಿದಂತೆ 400 ಮಂದಿ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
Advertisement
ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಕಳೆದುಕೊಂಡಿದ್ದಳು. ಇತ್ತ ತಂದೆ ಮಗಳನ್ನು ಬೇಗ ಮದುವೆ ಮಾಡಿ ಕಳುಹಿಸಬೇಕೆಂದು, ವರನನ್ನು ಹುಡುಕಿ ಮದುವೆ ಮಾಡಿದ್ದರು. ಗಂಡನ ಮನೆ ಸೇರಿದಾಗ, ಆಕೆಯ ಗಂಡ 6 ತಿಂಗಳು ಕೆಲಸ ಟ್ರೈನಿಂಗ್ ಹಿನ್ನೆಲೆ ಬೇರೆ ಊರಿಗೆ ತೆರಳಿದ್ದ. ಆಗ ಮಾವ ಸೊಸೆ ಮೇಲೆ ಮಾವ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ.
Advertisement
Advertisement
ಪತಿ ಮನೆಯ ಕಿರಕುಳದಿಂದ ಬೇಸತ್ತ ಆಕೆ ಕೆಲಸ ಹುಡುಕಿ ಹೋದಾಗ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಇಬ್ಬರು ದುರುಳರು ಅತ್ಯಾಚಾರವೆಸಗಿದ್ದಾರೆ. ಇದಾದ ಬಳಿಕ ಆಕೆ ಯಾವುದೋ ಜಾಲದಲ್ಲಿ ಸಿಲುಕಿ 400 ಮಂದಿ ಆಕೆ ಮೇಲೆ ಅತ್ಯಾಚಾರವೆಸಿಗಿದ್ದಾರೆ. ಪೊಲೀಸರು ಕೂಡ ತಮ್ಮ ತೀಟೆ ತಿರಿಸಿಕೊಳ್ಳಲು ಆಕೆಯನ್ನು ಬಳಸಿಕೊಂಡಿದ್ದಾರೆ. ಈಗ ಆಕೆ ಗರ್ಭಿಣಿಯಾಗಿದ್ದಾಳೆ. ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?
Advertisement
ಯುವತಿಯನ್ನು ಮಕ್ಕಳ ಇಲಾಖೆ ಸಮಿತಿ ರಕ್ಷಿಸಿದೆ. ಪೊಲೀಸ್ ಠಾಣೆಗೆ ತೆರಳಿ ಈ ಬಗ್ಗೆ ದೂರು ದಾಖಲಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. . ಈ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ? : ಕ್ಷಮೆ ಕೇಳಿದ ಹಂಸಲೇಖ