ಧಾರವಾಡ: 17 ವರ್ಷದ ಅಪ್ರಾಪ್ತೆ ಮೇಲೆ ಆಕೆಯ ಚಿಕ್ಕಪ್ಪನೇ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೋಗೆನಾಗರಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಪ್ತಾಪ್ತೆ ಚಿಕ್ಕಪ್ಪ ಮಹದೇವ ಗಂಜಿಗಟ್ಟಿ (45) ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪ ಮಾಡಿದ್ದಾಳೆ.
15 ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಹೋಗುವಾಗ, ಡ್ರಾಪ್ ಕೊಡುವುದಾಗಿ ಬಾಲಕಿಯ ಚಿಕ್ಕಪ್ಪ ಆಕೆಯನ್ನ ಟಾಟಾ ಏಸ್ ವಾಹನದಲ್ಲಿ ಕೂರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಅಪ್ರಾಪ್ತೆ ಆರೋಪ ಮಾಡಿದ್ದಾಳೆ.
ಸದ್ಯ ಬಾಲಕಿ ಸಾಧನಾ ಎಂಬ ಸಂಸ್ಥೆಯಲ್ಲಿದ್ದು, ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.