ಗಾಂಧಿನಗರ: ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ದಂತಥೆಸ್ಲಿ ಎಂಬ ಗ್ರಾಮದಲ್ಲಿ ಬುಧವಾರ ನಡೆದಿದೆ. ಬಾಲಕ ಮತ್ತು ಹುಡುಗಿ ಇಬ್ಬರು ನೆರೆಹೊರೆಯವರಾಗಿದ್ದು, ಹುಡುಗಿ ಬುಧವಾರ ಸಂಜೆ ಒಣಗಿದ ತೇಗದ ಎಲೆಗಳನ್ನು ತರಲು ಹೋಗಿದ್ದಳು. ಈ ವೇಳೆ ಬಾಲಕ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಈ ಘಟನೆಯ ಬಗ್ಗೆ ಹುಡುಗಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಷಕರು ದೂರು ನೀಡಿದ ಆಧಾರದ ಮೇರೆಗೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
Advertisement
ಆರೋಪಿ ಅಪ್ರಾಪ್ತನಾಗಿರುವ ಕಾರಣ ಆತನನ್ನು ಬಂಧಿಸಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಕಸ್ಟಡಿಗೆ ತೆಗೆದುಕೊಂಡು ಆತನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಇನ್ಸ್ ಪೆಕ್ಟರ್ ಬಿ.ಕೆ. ಗೋಸ್ವಾಮಿ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv