-ಮಗು ಸಹಿತ ಬಾಲಕಿಯನ್ನು ಕಾಡಿಗೆ ಅಟ್ಟಿದ ಹಾಸ್ಟೆಲ್ ಸಿಬ್ಬಂದಿ
ಭುವನೇಶ್ವರ: ಅಪ್ರಾಪ್ತ ಬಾಲಕಿಯೊಬ್ಬಳು ಆದಿವಾಸಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಮಗುವಿಗೆ ಜನ್ಮ ನೀಡಿದ ಹಿನ್ನೆಲೆಯಲ್ಲಿ ಆರು ಮಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಈ ಘಟನೆ ಒಡಿಶಾದ ಕಂಧಮಾಲ್ ಜಿಲ್ಲೆಯ ದರಿಂಗಿಬಾದಿಯಲ್ಲಿರುವ ‘ಸೇವಾ ಆಶ್ರಯ ಹೈಸ್ಕೂಲ್’ ಹಾಸ್ಟೆಲ್‍ನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಶನಿವಾರ ರಾತ್ರಿ ಮಗುವಿಗೆ ಜನ್ಮ ನೀಡಿದ್ದಾಳೆ. ವಿದ್ಯಾರ್ಥಿನಿಗೆ 14 ವಯಸ್ಸಾಗಿದ್ದು, 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಮಗು ಹುಟ್ಟಿದ ಬಳಿಕ ಆಕೆ ಮತ್ತು ಮಗುವನ್ನು ಹಾಸ್ಟೆಲ್ ನಿಂದ ಹೊರಗೆ ಹತ್ತಿರದ ಅರಣ್ಯಕ್ಕೆ ತಳ್ಳಿದ್ದಾರೆ ಎಂದು ಕಂಧಮಲ್ ಜಿಲ್ಲಾ ಕಲ್ಯಾಣ ಅಧಿಕಾರಿ ಚಾರುಲತಾ ಮಲ್ಲಿಕ್ ತಿಳಿಸಿದ್ದಾರೆ.
Advertisement
Advertisement
ಈ ಪ್ರಕರಣ ಈಗ ಅಧಿಕಾರಿಗಳಿಗೆ ತಲೆಬಿಸಿಯಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗೆ ಎಸ್‍ಸಿ/ಎಸ್‍ಟಿ ಕಲ್ಯಾಣ ಸಚಿವ ರಮೇಶ್ ಮಝಿ ಅವರು ಆದೇಶಿಸಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಪೊಲೀಸರು ಕೂಡ ಈ ಕುರಿತಾಗಿ ತನಿಖೆ ನಡೆಸುತ್ತಿದ್ದಾರೆ.
Advertisement
ಭಾನುವಾರ ಮುಂಜಾನೆ ಇಬ್ಬರು ಅರಣ್ಯ ಅಧಿಕಾರಿಗಳು ಬಾಲಕಿಯನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕಿ ಹಾಗೂ ಆಕೆಯ ಮಗು ಇಬ್ಬರು ಫುಲಬಾನಿ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು ಮತ್ತು ತಾಯಿ ಇಬ್ಬರ ಸ್ಥಿತಿ ಉತ್ತಮವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
ಎಂಟು ತಿಂಗಳ ಹಿಂದೆ ಬಾಲಕಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿದೆ. ಆದರೆ ಬಾಲಕಿ ಭಯದಿಂದ ಈ ಬಗ್ಗೆ ಎಲ್ಲೂ ಹೇಳಿಕೊಂಡಿಲ್ಲ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರಿಂಗ್‍ಬಾದಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ಪೊಲೀಸರು ಬಂಧಿಸಿ, ವಿಚಾರಣೆ ಮುಂದುವರಿಸಿದ್ದಾರೆ.
ಜಿಲ್ಲಾಧಿಕಾರಿ ಬೃಂದ ಅವರು, ಹಾಸ್ಟೆಲ್‍ನ ಇಬ್ಬರು ಅಡುಗೆ ಭಟ್ಟರು, ಮಹಿಳಾ ಮೇಲ್ವಿಚಾರಕಿ ಹಾಗೂ ಓರ್ವ ದಾದಿಯನ್ನು ಅಮಾನತು ಮಾಡಿದ್ದಾರೆ. ಜೊತೆಗೆ ಈ ಶಾಲೆಯ ಮುಖ್ಯಶಿಕ್ಷಕಿ ರಾಧಾ ರಾಣಿ ಅವರನ್ನೂ ಅಮಾನತು ಮಾಡುವಂತೆ ಸರ್ಕಾರ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv