ಹೈದರಾಬಾದ್: 17 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಮೂವರು ಅಪ್ರಾಪ್ತರು ಸೇರಿದಂತೆ ಆರು ಕಾಮುಕರು ಒಂದು ವಾರದ ಕಾಲ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಆಂಧ್ರ ಪ್ರದೇಶದ ಒಂಗೋಲ್ ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಆರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಆರನೇ ದಿನ ಬಾಲಕಿಯನ್ನು ಆರೋಪಿಗಳು ಬಿಟ್ಟಿದ್ದು, ಆಗ ಯಾರಿಗೂ ಈ ಬಗ್ಗೆ ಹೇಳಬಾರದು ಎಂದು ಬೆದರಿಕೆ ಹಾಕಿದ್ದರು. ಆದರೆ ರಸ್ತೆಯಲ್ಲಿ ಬಿದ್ದಿದ್ದ ಸಂತ್ರಸ್ತೆಯನ್ನು ನೋಡಿ ಜನರು ಪೊಲೀಸರಿಗೆ ಮಾಹಿತಿ ತಿಳಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
Advertisement
Advertisement
ಏನಿದು ಪ್ರಕರಣ?
ಜೂನ್ 16 ರಂದು ಅಪ್ರಾಪ್ತ ಬಾಲಕಿ ಗುಂಟೂರಿನ ತನ್ನ ಮನೆಯಿಂದ ಸ್ನೇಹಿತನನ್ನು ಭೇಟಿಯಾಗಲು ಒಂಗೋಲ್ ಬಸ್ ನಿಲ್ದಾಣಕ್ಕೆ ಹೋಗಿದ್ದಳು. ನಂತರ ಸುಮಾರು ರಾತ್ರಿ 7 ಗಂಟೆ ಆಕೆ ಸ್ನೇಹಿತನನ್ನು ಭೇಟಿಯಾಗಲು ಸೆಲ್ ಫೋನ್ ಅಂಗಡಿಯಲ್ಲಿ ಕೆಲಸ ಮಾಡುವ ಶೈಕ್ ಬಾಜಿಯ ಸಹಾಯ ಕೇಳಿದ್ದಳು. ಈ ವೇಳೆ ಆತ ಬಾಲಕಿಯನ್ನು ಬಲವಂತವಾಗಿ ತನ್ನ ಅಂಗಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
Advertisement
ನಂತರ ಸಂತ್ರಸ್ತೆ ಅಂಗಡಿಯಿಂದ ತಪ್ಪಿಸಿಕೊಂಡು ಹೋಗಿದ್ದಳು. ಆದರೆ ಮತ್ತೆ ಸ್ನೇಹಿತನಿಗಾಗಿ ಕಾಯುತ್ತಿದ್ದಾಗ ಶೈಕ್ ಬಾಜಿಯ ಸ್ನೇಹಿತರು ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಯನ್ನು ಹತ್ತಿರದ ಫ್ಲ್ಯಾಟ್ಗೆ ಕರೆದುಕೊಂಡು ಹೋಗಿ ಕೂಡಿ ಹಾಕಿದ್ದಾರೆ. ನಂತರ ಒಂದು ವಾರದವರೆಗೂ ಕೂಡಿ ಹಾಕಿ ಅಪ್ರಾಪ್ತರು ಸೇರಿದಂತೆ ಆರು ಮಂದಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಆರೋಪಿಗಳು ಶೈಕ್ ಬಾಜಿ, ರವುಲಾ ಶ್ರೀಕಾಂತ್ ರೆಡ್ಡಿ, ಪಾತ್ರಾ ಮಹೇಶ್ ಎಂದು ಗುರುತಿಸಲಾಗಿದೆ. ಇನ್ನೂ ಮೂವರು ಅಪ್ರಾಪ್ತರಾಗಿದ್ದು, ಜೂನ್ 22 ರಂದು ಓರ್ವ ಆರೋಪಿ ಓಂಗೋಲ್ ಬಸ್ ನಿಲ್ದಾಣಕ್ಕೆ ಸಂತ್ರಸ್ತೆಯನ್ನು ಕರೆದುಕೊಂಡು ಬಿಟ್ಟಿದ್ದಾನೆ. ಈ ವೇಳೆ ಬೇರೆ ಯಾರಿಗೂ ಈ ವಿಚಾರವನ್ನು ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಮಹಿಳಾ ಪೊಲೀಸ್ ತಂಡ ಸ್ಥಳಕ್ಕೆ ಹೋಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಜಿಲ್ಲಾ ಎಸ್ಪಿ ಸಿದ್ಧಾರ್ಥ್ ಕೌಶಲ್ ಹೇಳಿದರು.
ಈ ಕುರಿತು ಪೋಕ್ಸೋ ಕಾಯ್ಡೆಯಡಿ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ. ಈ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಶೀಘ್ರವಾಗಿ ತನಿಖೆ ಮಾಡಿ ಇದೀಗ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ನಾಲ್ವರು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸಂತ್ರಸ್ತೆಗೆ ಸೂಕ್ತ ನ್ಯಾಯ ಒದಗಿಸಿಕೊಡುತ್ತೇವೆ ಎಂದು ಎಸ್ಪಿ ತಿಳಿಸಿದ್ದಾರೆ.
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ವಾಸಿರೆಡ್ಡಿ ಪದ್ಮಾ ಕೂಡ ಸಂತ್ರಸ್ತೆಯನ್ನು ಭೇಟಿ ಮಾಡಿದ್ದು, ಸಂತ್ರಸ್ತೆಗೆ ಸುರಕ್ಷತೆ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.