ಕಲಬುರಗಿ: ಮೊಬೈಲ್‌ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ ಪ್ರಚೋದನೆಗೊಂಡ ಅಪ್ರಾಪ್ತನೊಬ್ಬ 14 ವರ್ಷದ ಬಾಲಕಿಯನ್ನು ಅತ್ಯಾಚಾರ(Rape) ಮಾಡಿ ಹತ್ಯೆಗೈದ(Murder) ಶಾಕಿಂಗ್ ಘಟನೆ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ. ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್‌ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.
Advertisement
Advertisement
9ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ದೀಪಾವಳಿ ರಜೆಗೆ ತನ್ನ ಸ್ವಗ್ರಾಮಕ್ಕೆ ತೆರಳಿ, ನ.3 ರಿಂದ ಪರೀಕ್ಷೆ ಇರುವ ಕಾರಣ ಮಂಗಳವಾರ ಮರಳಿ ಬಂದಿದ್ದಳು. ಸ್ಥಳಕ್ಕೆ ಕಲಬುರಗಿ ಎಸ್‌ಪಿ ಇಶಾ ಪಂತ್ ಸೇರಿ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಪೊಲೀಸರು ಮ್ಯಾಚ್ ಫಿಕ್ಸಿಂಗ್ ಮಾಡೋದನ್ನು ಬಿಡಿ, ನಿಷ್ಠೆಯಿಂದ ಕೆಲಸ ಮಾಡಿ: ಅಲೋಕ್ ಕುಮಾರ್
Advertisement
ಕಣ್ಣೀರಿಟ್ಟಿರುವ ಎಸ್‍ಪಿ ಇಶಾ ಪಂತ್, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಪೊಲೀಸರು ಕೂಡಲೇ ಕಾರ್ಯಾಚರಣೆ ನಡೆಸಿ 16 ವರ್ಷದ ಬಾಲಕನನ್ನು ಬಂಧಿಸಿದ್ದಾರೆ. 24 ಗಂಟೆಯ ಒಳಗಡೆ ಆರೋಪಿಯನ್ನು ಬಂಧಿಸಿದ್ದಕ್ಕೆ ಪೊಲೀಸರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಲಾಗಿದೆ ಎಂದು ತಿಳಿಸಿದರು.
Advertisement
ಬಾಲಕಿಯನ್ನು ಒಂಟಿಯಾಗಿ ನೋಡಿದ ಬಾಲಕ ಅತ್ಯಾಚಾರ ನಡೆಸಿದ ನಂತರ ಕಲ್ಲಿನಿಂದ ಹೊಡೆದು ವೇಲ್ ನಿಂದ ಕತ್ತು ಹಿಸುಕಿ ಬಾಲಕ ಕೊಲೆ ಮಾಡಿದ್ದಾನೆ. ಅತ್ಯಾಚಾರ ಖಂಡಿಸಿ ಕಲಬುರಗಿ, ಆಳಂದದಲ್ಲಿ ಪ್ರತಿಭಟನೆ ನಡೆಸಿರುವ ಜನ, ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.