ಗಾಂಧಿನಗರ: ಕಾಮುಕರು ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೇ, ಆಕೆಯ ದೇಹಕ್ಕೆ 37 ಬಾರಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತಿನ ಗಿರ್-ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಬೆಳಗ್ಗೆ ಗಿರ್-ಸೋಮನಾಥ್ ಜಿಲ್ಲೆಯ ಕೊಡಿಯಾರ್ ಬಳಿಯ ಉನಾ ಹೆದ್ದಾರಿಯ ಸಮೀಪ 16 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ದುಷ್ಕರ್ಮಿಗಳು ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ದೇಹಕ್ಕೆ 35-37 ಬಾರಿ ಚೂರಿಯಿಂದ ಇರಿದು ಕೊಂದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.
Advertisement
Advertisement
ಕೊಲೆಯಾದ ಬಾಲಕಿ ಕೊಡಿಯಾರ್ ಪಟ್ಟಣದ ಕಾರ್ಪೋರೇಟ್ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದಳು. ಬಾಲಕಿ ಸೋಮವಾರ ಜುನಿ ಬಜಾರಿನಲ್ಲಿ ಪುಸ್ತಕ ತೆಗೆದುಕೊಂಡು ಮನೆಗೆ ಬರುವುದಾಗಿ ಪೋಷಕರಿಗೆ ರಾತ್ರಿ 8.30ರ ಹೊತ್ತಿಗೆ ಕರೆಮಾಡಿ ಹೇಳಿದ್ದಳು. ಆದರೆ ಎಷ್ಟೇ ಹೊತ್ತು ಕಾದರೂ ಆಕೆ ಮನೆಗೆ ವಾಪಾಸ್ಸಾಗಿರಲಿಲ್ಲ. ಅಲ್ಲದೇ ಆಕೆಯ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು. ಇದರಿಂದ ಆತಂಕಗೊಂಡ ಪೋಷಕರು ರಾತ್ರಿ 11ರ ಸುಮಾರಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
Advertisement
ಮಂಗಳವಾರ ಬೆಳಗ್ಗೆ ಬಾಲಕಿಯ ಮೃತದೇಹ ಆಕೆಯ ಮನೆಯಿಂದ 2 ಕಿ.ಮೀ. ದೂರದಲ್ಲಿರುವ ದಾತೇಶ್ವರ್ ಮಹದೇವ್ ದೇವಾಲಯದ ಬಳಿ ಅರೆನಗ್ನ ಸ್ಥಿತಿಯಲ್ಲಿ ಸಿಕ್ಕಿತ್ತು. ಬಾಲಕಿಯ ಸ್ನೇಹಿತರೇ ಈ ಕೃತ್ಯ ಎಸಗಿದ್ದು, ಈ ಸಂಬಂಧ ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಮರಣೋತ್ತರ ವರದಿಯ ನಂತರ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಎನ್ನುವ ಮಾಹಿತಿಯನ್ನು ಬಹಿರಂಗಪಡಿಸಲಾಗುತ್ತದೆಂದು ಕೊಡಿಯಾರ್ ಪೊಲೀಸ್ ಇನ್ಸ್ ಪೆಕ್ಟರ್ ಜೆ.ಬಿ.ಚಾವ್ಡಾ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv