ಮೈಸೂರು: ಅಪ್ರಾಪ್ತೆ ಮೇಲೆ ಚಿಕ್ಕಪ್ಪನಿಂದಲೇ ಅತ್ಯಾಚಾರ ನಡೆದು ಬಾಲಕಿ ಗರ್ಭಿಣಿ ಆಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಈ ಸಂಬಂಧ ಕಾಮುಕ ಚಿಕ್ಕಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ನಂಜುಂಡಸ್ವಾಮಿ ಅತ್ಯಾಚಾರವೆಸಗಿದ ಕಾಮುಕ ಚಿಕ್ಕಪ್ಪ. ಶಾಲೆಗೆ ತೆರಳಿದ್ದ ವಿದ್ಯಾರ್ಥಿನಿಯನ್ನು ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: Uttar Pradesh | ಪತ್ನಿಯ ಅಕ್ರಮ ಸಂಬಂಧ ತಿಳಿದು ಪ್ರಿಯಕರನೊಂದಿಗೇ ಮದ್ವೆ ಮಾಡಿಸಿದ ಪತಿ
10ನೇ ತರಗತಿ ಓದುತ್ತಿದ್ದ ಅಪ್ರಾಪ್ತೆ ಮೇಲೆ ಪಾಪಿ ಚಿಕ್ಕಪ್ಪ ಅತ್ಯಾಚಾರವೆಸಗಿದ್ದಾನೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ಕಾಮುಕ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ತಿಳಿಸಿ ಅಮಾಯಕನಂತೆ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ಪಿರಿಯಡ್ಸ್‌ನಲ್ಲಿ ವ್ಯತ್ಯಾಸ ಕಂಡುಬಂದು ಹೊಟ್ಟೆ ನೋವಿದೆ ಎಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹಾಲಿನ ದರ ಏರಿಕೆ – ಇಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ, 2-3 ರೂ. ಹೆಚ್ಚಳ ಸಾಧ್ಯತೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಬಾಲಕಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ. ನಂಜುಂಡಸ್ವಾಮಿ ವಿರುದ್ದ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ನೊಂದ ಬಾಲಕಿಯನ್ನು ಬಾಲಮಂದಿರದಿಂದ ಪರೀಕ್ಷಾ ಕೇಂದ್ರಕ್ಕೆ ಪೊಲೀಸರ ಭದ್ರತೆಯೊಂದಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ. ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಏಕನಾಥ್ ಶಿಂಧೆ ʻದೇಶದ್ರೋಹಿʼ ಎಂದಿದ್ದ ಕಾಮೆಡಿಯನ್ ಕುನಾಲ್ ಕಮ್ರಾಗೆ 2ನೇ ಸಮನ್ಸ್