ಡೆಹ್ರಾಡೂನ್: ಉತ್ತರಾಖಂಡ (Uttarakhand) ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ದೆಹಲಿಯಿಂದ (Delhi) ಡೆಹ್ರಾಡೂನ್‍ಗೆ (Dehradun) ಪ್ರಯಾಣಿಸುತ್ತಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ರಾಜ್ಯ ಸಾರಿಗೆ ಇಲಾಖೆಯ ಐವರು ನೌಕರರನ್ನು ಭಾನುವಾರ ಬಂಧಿಸಲಾಗಿದೆ.
ಬಾಲಕಿ ಪ್ರಯಾಣಿಸಿದ ಬಸ್‍ನ ಚಾಲಕ, ಕಂಡಕ್ಟರ್, ಅದರ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ಬಸ್‍ನ ಚಾಲಕ, ಕಂಡಕ್ಟರ್ ಮತ್ತು ಐಎಸ್‍ಬಿಟಿಯಲ್ಲಿ ಕ್ಯಾಷಿಯರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಲ್ಲಾ ಐವರು ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಡೆಹ್ರಾಡೂನ್ ಎಸ್‍ಎಸ್‍ಪಿ ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಘಟನೆಯ ನಂತರ, ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ಬಾಲಕಿಯನ್ನು ರಾಜ್ಯ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ, ಕೌನ್ಸೆಲಿಂಗ್ ಅವಧಿಯಲ್ಲಿ ಬಾಲಕಿ ಲೈಂಗಿಕ ದೌರ್ಜನ್ಯದ ಬಗ್ಗೆ ಸಿಡಬ್ಲ್ಯೂಸಿ ಸಿಬ್ಬಂದಿಗೆ ತಿಳಿಸಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಲ್ಲದೇ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲೂ ಇಂತಹದ್ದೇ ಘಟನೆ ನಡೆದಿದೆ. ಹದಿಹರೆಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 69 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಕೋಲ್ಕತ್ತಾದಲ್ಲಿ ಇತ್ತೀಚೆಗೆ ನಡೆದ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ಮಹಿಳೆಯರ ಸುರಕ್ಷತೆಯ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಡೆಹ್ರಾಡೂನ್‍ನಲ್ಲಿ ಅಮಾನವೀಯ ಘಟನೆ ನಡೆದಿದೆ.
ಆಗಸ್ಟ್ 9 ರಂದು ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯು ಶವವಾಗಿ ಪತ್ತೆಯಾಗಿದ್ದಳು. ಆಕೆಯ ಶವಪರೀಕ್ಷೆ ನಂತರ ಕರ್ತವ್ಯದಲ್ಲಿರುವಾಗಲೇ ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ ಎಂದು ತಿಳಿದುಬಂದಿತ್ತು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಖಂಡಿಸಿ ದೇಶಾದ್ಯಂತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.
ಅಪರಾಧ ಅಂಕಿ ಅಂಶಗಳ ಪ್ರಕಾರ 2021ರಲ್ಲಿ ದೇಶಾದ್ಯಂತ 31,000ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ವರದಿಗಳು ಉಲ್ಲೇಖಿಸಿವೆ.