ಕಲಬುರಗಿ: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತಿಥಿ ಶಿಕ್ಷಕ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ (Madanhipparga Police Station) ವ್ಯಾಪ್ತಿಯಲ್ಲಿ ನಡೆದಿದೆ.
14 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಕಾಮುಕ ಅತಿಥಿ ಶಿಕ್ಷಕ ಶಿವರಾಜ್ ಅತ್ಯಾಚಾರ ಎಸಗಿದ್ದಾನೆ. ಅದೇ ಗ್ರಾಮದ ಶಾಲೆಯಲ್ಲಿ ಹಲವು ದಿನಗಳಿಂದ ಶಿವರಾಜ್ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇದನ್ನೂ ಓದಿ: UGCET ಪ್ರವೇಶ ಪತ್ರ ಬಿಡುಗಡೆ – ಮೊದಲ ಬಾರಿಗೆ ಕ್ಯೂಆರ್ ಕೋಡ್ ಮಾದರಿ OMR Sheet
ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಗೆ ನುಗ್ಗಿ ಶಿವರಾಜ್ ಅತ್ಯಾಚಾರ ಎಸಗಿದ್ದ. ಮಾದನಹಿಪ್ಪರಗಾ ಪೊಲೀಸರು ಶಿವರಾಜ್‌ನನ್ನು ಬಂಧಿಸಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ನಿಲ್ದಾಣಗಳಲ್ಲಿ ಮಲ್ಟಿ ಲೆವೆಲ್ ಪಾರ್ಕಿಂಗ್‌ಗೆ ಚಿಂತನೆ