LatestMain PostNational

ಹುಟ್ಟುಹಬ್ಬ ಆಚರಣೆ- ಶಾಲಾ ವಿದ್ಯಾರ್ಥಿಗಳ ಗುಂಪಿನ ನಡುವೆ ಬಾಂಬ್ ದಾಳಿ

Advertisements

ಲಕ್ನೋ: ಹುಟ್ಟುಹಬ್ಬ ಆಚರಿಸುತ್ತಿದ್ದಾಗ ಶಾಲಾ ವಿದ್ಯಾರ್ಥಿಗಳ 2 ಗುಂಪುಗಳ ನಡುವೆ ಬಾಂಬ್ ದಾಳಿ ನಡೆದ ಘಟನೆ ಉತ್ತರಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆದಿದೆ.

ಉತ್ತರಪ್ರದೇಶದ ಪ್ರಯೋಗರಾಜ್‍ನಲ್ಲಿ ಗುಂಪೊಂದು ಹುಟ್ಟುಹಬ್ಬದಲ್ಲಿ ತೊಡಗಿತ್ತು. ಆ ವೇಳೆ ಅಲ್ಲಿಗೆ ಬಂದ ಮತ್ತೊಂದು ಗುಂಪೊಂದು ಅವರ ಮೇಲೆ ಬಾಂಬ್ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಹುಟ್ಟುಹಬ್ಬದಲ್ಲಿ ತೊಡಗಿದ್ದ ಗುಂಪು ದಾಳಿ ನಡೆಸಿದೆ. ಈ ವೇಳೆ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಎಸ್ಪಿ ದಿನೇಶ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ಘಟನೆ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಪಡೆ ಧಾವಿಸಿದೆ. ಅವರೆಲ್ಲರೂ ಒಂದೇ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ. ಈ ಹಿಂದೆಯೂ ಎರಡೂ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಕನಸಿನ ಕೂಸಿನಿಂದಲೇ ಜಮೀರ್‌ ಲಾಕ್‌

crime

ಗಾಯಗೊಂಡ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಈಗಾಗಲೇ ಒಬ್ಬರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮಳೆ ಅಬ್ಬರ – ನೀರಲ್ಲಿ ಕೊಚ್ಚಿ ಹೋದ 1ನೇ ತರಗತಿ ಬಾಲಕಿ

Live Tv

Leave a Reply

Your email address will not be published.

Back to top button