ಬೆಳಗಾವಿ: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ (Minority Department) ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ (Hostel) ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ತಿಳಿಸಿದ್ದಾರೆ.
ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಬಲ್ಕೀಸ್ ಬಾನು ಪ್ರಶ್ನೆಗೆ ಉತ್ತರ ನೀಡಿದ ಅವರು, ಇಲಾಖೆಯ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೃಂದ ಮತ್ತು ನೇಮಕಾತಿ ನಿಯಮಗಳು 2011ರ ಸಮಗ್ರ ಪರಿಷ್ಕರಣೆಯ ಪುಸ್ತಾವನೆಯು ಪರಿಶೀಲನೆಯಲ್ಲಿದೆ. ಈ ನಿಯಮಗಳು ಪರಿಷ್ಕರಣೆ ಆದ ನಂತರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದರು. ಇದನ್ನೂ ಓದಿ: ‘ಪಬ್ಲಿಕ್ ಟಿವಿ’ ಇಂಪ್ಯಾಕ್ಟ್; ನಿತ್ಯ 7 ಕಿಮೀ ನಡೆಯುತ್ತಿದ್ದ ಶಾಲಾ ಮಕ್ಕಳಿಗೆ ಸಿಕ್ತು ಜೀಪ್ ಭಾಗ್ಯ
ಪ್ರಸ್ತುತ ವಿದ್ಯಾರ್ಥಿ ನಿಲಯಗಳ ಸುಗಮ ಕಾರ್ಯನಿರ್ವಹಣೆಗಾಗಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಖಾಲಿ ಇರುವ ನಿಲಯಪಾಲಕರ ಹುದ್ದೆಗಳಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೆಚ್ಚುವರಿ ಪ್ರಭಾರದ ವ್ಯವ್ಯಸ್ಥೆಯನ್ನು ತಾತ್ಕಾಲಿಕವಾಗಿ ಮಾಡಲಾಗಿರುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದ್ರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ರಾಮಲಿಂಗಾ ರೆಡ್ಡಿ

