ಇಂಪಾಲ್: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಟ್ಟ ಮೀರಾಬಾಯಿ ಚಾನು ಅವರು ಈಗ ಮಣಿಪುರ ಪೊಲೀಸ್ ಇಲಾಖೆಯಲ್ಲಿ ಅಡಿಷನಲ್ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (ಎಎಸ್‌ಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Advertisement
ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಜಯಿಸಿದ್ದರು. ಈ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಅವರದ್ದೇ ಮೊದಲ ಪದಕವಾಗಿತ್ತು. ಇದನ್ನೂ ಓದಿ: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ತೊರೆದ ವಿರಾಟ್ ಕೊಹ್ಲಿ
Advertisement
Our Nation’s pride, Olympian Silver medalist, @mirabai_chanu has taken charge as the Additional Superintendent of Police (Sports), Manipur Police and called on me at my office today. pic.twitter.com/sCQDuxm6BY
— N.Biren Singh (@NBirenSingh) January 15, 2022
Advertisement
ಮೀರಾ ಭಾರತಕ್ಕೆ ಪದಕ ತಂದುಕೊಟ್ಟ ಸಾಧನೆಗಾಗಿ ಅವರಿಗೆ ಎಎಸ್‌ಪಿ ಹುದ್ದೆ ನೀಡುವುದಾಗಿ ಮಣಿಪುರ ಸರ್ಕಾರ ಘೋಷಿಸಿತ್ತು. ಆಗಾಗಲೇ ಮೀರಾಬಾಯಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆ ವೃತ್ತಿಯನ್ನು ತೊರೆದು ಪೊಲೀಸ್ ಇಲಾಖೆಗೆ ಸೇರುವಂತೆ ಸಿಎಂ ಬಿರೇನ್ ಸಿಂಗ್ ಸಲಹೆ ನೀಡಿದ್ದರು.
Advertisement
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಪದಕ ತಂದುಕೊಟ್ಟು ಮೀರಾಬಾಯಿ ಸಾಧನೆ ಮಾಡಿದರು. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಬಾಕ್ಸರ್ ಲವ್ಲಿನಾ ಈಗ ಡಿಎಸ್‌ಪಿ