ಗದಗ: ನಗರದಲ್ಲಿ ಡಿಸೇಲ್ ಟ್ಯಾಂಕರ್, ಲಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಗದಗ ನಗರದ ರಾಚೂಟೇಶ್ವರ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಗುರುವಾರ ತಡರಾತ್ರಿ ನಡೆದ ಕಿಡಿಗೇಡಿಗಳ ಈ ಕೃತ್ಯಕ್ಕೆ ವಾಹನಗಳು ಬೆಂಕಿಗಾಹುತಿಯಾಗಿವೆ.
Advertisement
Advertisement
ಮನೆ ಎದರು ನಿಲ್ಲಿಸಿದ ವಾಹನಗಳ ಟಯರ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಟಯರ್ ಬ್ಲಾಸ್ಟ್ ಆಗಿದ್ದು, ಈ ಶಬ್ದ ಕೇಳಿದ ಬಳಿಕ ಕಿಡಿಗೇಡಿಗಳ ಕೃತ್ಯ ಬೆಳಕಿಗೆ ಬಂದಿದೆ.
Advertisement
ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಕೊಪ್ಪಳದ ಸಾಯಿನಾಥ್ ಎಂಬವರಿಗೆ ಸೇರಿದ ಟ್ಯಾಂಕರ್ ಹಾಗೂ ಗದಗ ನಗರದ ಮಲ್ಲೇಶ್ ಪುರದ ಎಂಬವರಿಗೆ ಸೇರಿದ ಲಾರಿ ಇದಾಗಿದೆ.
Advertisement
ಗದಗ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.