ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳ ಗುಂಪೊಂದು ಬುಧವಾರ ಮಧ್ಯಾಹ್ನ ದಾಳಿ ನಡೆಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ಕೇಜ್ರಿವಾಲ್ ಅವರ ಮನೆ ಮೇಲೆ ದಾಳಿ ನಡೆಸಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ತಿಳಿಸಿರುವ ಸಿಸೋಡಿಯಾ ದೆಹಲಿ ಮುಖ್ಯಮಂತ್ರಿ ನಿವಾಸದ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಭದ್ರತಾ ತಡೆಗೋಡೆಗಳು ಧ್ವಂಸವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನಿಸಿದೆ ಎಂದು ಎಎಪಿ ಆರೋಪಿಸಿದೆ. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ
Advertisement
दिल्ली में मुख्यमंत्री @ArvindKejriwal जी के घर पर असामाजिक तत्वों ने हमला कर CCTV कैमरे और सिक्योरिटी बैरियर तोड़ दिए है. गेट पर लगे बूम बेरियर भी तोड़ दिए है.
— Manish Sisodia (@msisodia) March 30, 2022
Advertisement
ದೆಹಲಿ ಸಿಎಂ ಕೇಜ್ರಿವಾಲ್ ಅವರ ನಿವಾಸದ ಭದ್ರತಾ ಆಸ್ತಿಗಳನ್ನು ಬಿಜೆಪಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರು ಹಾಗೂ ಸಿಸೋಡಿಯಾ ಆರೋಪಿಸಿದ್ದಾರೆ. ಇದನ್ನೂ ಓದಿ: ಟಿಪ್ಪು ಇತಿಹಾಸ ತಾಲಿಬಾನ್, ಐಸಿಸ್ ಮತಾಂಧರಷ್ಟೇ ಘೋರ: ಬಿಜೆಪಿ ವಾಗ್ದಾಳಿ
Advertisement
बीजेपी के गुंडे CM @ArvindKejriwal जी के घर पर तोड़फोड़ करते रहे. बीजेपी की पुलिस उन्हें रोकने की जगह उन्हें घर के दरवाज़े तक लेकर आई. https://t.co/oSFc2kWaDC
— Manish Sisodia (@msisodia) March 30, 2022
Advertisement
ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.