ದಾವಣಗೆರೆ: ಫಸಲಿಗೆ ಬಂದಿದ್ದ 300ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು (Arecanut Trees) ದುಷ್ಕರ್ಮಿಗಳು ಕಡಿದು ಹಾಕಿರುವ ಘಟನೆ ಜಗಳೂರು (Jagalur) ತಾಲೂಕಿನ ಕಾಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ (Farmer) ಅಜ್ಜಪ್ಪ ಎಂಬವರಿಗೆ ಸೇರಿದ ನಾಲ್ಕು ವರ್ಷದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಅವರು ಬೆಳಗ್ಗೆ ಜಮೀನಿಗೆ ಬಂದಾಗ ದುಷ್ಕರ್ಮಿಗಳ ಕೃತ್ಯ ಬೆಳಕಿಗೆ ಬಂದಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ಕಣೀರಿಟ್ಟಿದ್ದಾನೆ. ಇದನ್ನೂ ಓದಿ: ಉಡುಪಿ | ಕಾಂತಾರ ಚಿತ್ರದ ಕಂಬಳದ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಇನ್ನಿಲ್ಲ
ಸ್ಥಳಕ್ಕೆ ಜಗಳೂರು ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ