ಮೈಸೂರು: ಮಾಲೀಕನ ಮೇಲಿನ ವೈಯಕ್ತಿಕ ದ್ವೇಷಕ್ಕೆ ದುಷ್ಕರ್ಮಿಗಳು ಜಮೀನಿನಲ್ಲಿ ಬೆಳೆದಿದ್ದ ಬಾಳೆ ಬೆಳೆಯನ್ನು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಸಮೀಪದ ಅತ್ತಹಳ್ಳಿ ಗ್ರಾಮದ ರಾಮಪ್ರಸಾದ್ ಎಂಬವರಿಗೆ ಸೇರಿದ್ದು, ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಲಕ್ಷಾಂತರ ರೂ. ಮೌಲ್ಯದ ಬಾಳೆ ಬೆಳೆಯನ್ನು ಕಿಡಿಗೇಡಿಗಳು ಕತ್ತರಿಸಿ ಹಾಕಿದ್ದಾರೆ. ಬಂಪರ್ ಬೆಳೆಯ ನಿರೀಕ್ಷೆಯಲ್ಲಿದ್ದ ರೈತ ದುಷ್ಕರ್ಮಿಗಳ ಕೃತ್ಯದಿಂದ ಅಪಾರ ನಷ್ಟ ಅನುಭವಿಸಿದ್ದಾರೆ.
Advertisement
ಕೃತ್ಯದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.