ಮಂಡ್ಯ: ಮುನೇಶ್ವರ ಸ್ವಾಮಿಯ (Muneshwara Swamy) ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಜ್ಜಿಗೆಪುರ ರಸ್ತೆಯಲ್ಲಿರುವ ಮುನೇಶ್ವರ ದೇಗುಲದಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಮುನೇಶ್ವರಸ್ವಾಮಿಯ ಮುಖದ ಭಾಗವನ್ನು ವಿರೂಪಗೊಳಿಸದ್ದಾರೆ. ಇದರಿಂದ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಯನಗರ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಆಟಾಟೋಪ ಮೆರೆದಿದ್ದ ಪುಡಿರೌಡಿಗಳ ಬಂಧನ
ಪವಿತ್ರ ಸ್ಥಳದಲ್ಲಿ ಈ ರೀತಿಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆಆರ್‌ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ BMW ಕಾರು – ಮೂವರು ದುರ್ಮರಣ

