ಚೆನ್ನೈ: ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ (Coimbatore) ನಡೆದಿದೆ.
ತಮಿಳುನಾಡಿನ (Tamil Nadu) ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ (BJP) ಕಚೇರಿಯಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಾಂಬ್ ಎಸೆಯುವ ಮೊದಲು ಬಿಜೆಪಿ ಕಚೇರಿ ಬಳಿ ಕೆಲವರು ಅನುಮಾನಸ್ಪದವಾಗಿ ಚಲಿಸಿರುವುದು ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ಹಾನಿ ಅಥವಾ ಯಾರಿಗೂ ತೊಂದರೆಯೂ ಆಗಲಿಲ್ಲ. ಈ ರೀತಿ ಘಟನೆಯು ಬಿಜೆಪಿ ಕಾರ್ಯಕರ್ತರನ್ನು ತಡೆಯುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (Annamalai) ಟ್ವೀಟ್ ಮಾಡಿದ್ದಾರೆ.
Advertisement
Advertisement
ಟ್ವೀಟ್‍ನಲ್ಲಿ ಏನಿದೆ?: ಕೊಯಮತ್ತೂರು ಪಕ್ಷದ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ್ದಾರೆ. ಆದರೆ ಈ ಘಟನೆಯಿಂದ ನಮ್ಮ ಸಹೋದರ ಸಹೋದರಿಯರನ್ನು ತಡೆಯಲು ಸಾಧ್ಯವಿಲ್ಲ. ಇದು ನಮ್ಮ ಸಮಾಜ ಮತ್ತು ದೇಶಕ್ಕೆ ದ್ರೋಹ ಬಗೆಯುವ ಶಕ್ತಿಗಳ ವಿರುದ್ಧ ಕಠಿಣವಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ತಿಳಿಸಿದರು.
Advertisement
Petrol Bomb hurled on our Coimbatore @BJP4TamilNadu party office will not deter our brothers & sisters one bit.
This will only strengthen our resolve to fight hard against these very forces who are inimical to our society & country.
(1/3)
— K.Annamalai (@annamalai_k) September 23, 2022
Advertisement
ಗುರುವಾರ ದೇಶಾದ್ಯಂತ ಹಲವು ಭಾಗಗಳಲ್ಲಿ ಪಿಎಫ್‍ಐ ಕಚೇರಿಗಳು ಹಾಗೂ ಅದರ ಪದಾಧಿಕಾರಿಗಳ ನಿವಾಸಗಳ ಮೇಲೆ ಎನ್‍ಐಎ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ
ಘಟನೆಗೆ ಸಂಬಂಧಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪೆಟ್ರೋಲ್ ತುಂಬಿದ ಬಾಟಲಿಯು ಪಕ್ಷದ ಕಚೇರಿಯ ಕೆಳಗೆ ಬಿದ್ದಿರುವುದು ಕಂಡುಬಂದಿದೆ. ಇದನ್ನೂ ಓದಿ: NIA ಮಿಡ್‌ನೈಟ್ ಆಪರೇಷನ್- ಬೆಂಗ್ಳೂರಿನಲ್ಲಿ ಶಂಕಿತ ಉಗ್ರ ಯಾಸಿರ್ ಅರೆಸ್ಟ್