ಹಾವೇರಿ: 8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳದ (Maize) ರಾಶಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾದ ಘಟನೆ ಹಾವೇರಿ (Haveri) ತಾಲೂಕಿನ ಕಾಟೇನಹಳ್ಳಿ (Katenahalli) ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊರವಲಯದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಾಗಣ್ಣನವರ್ ಎಂಬವರಿಗೆ ಸೇರಿದ ಮೆಕ್ಕೆಜೋಳದ ರಾಶಿ ಸುಟ್ಟು ಭಸ್ಮವಾಗಿದೆ. ಸುಮಾರು 4 ಲಕ್ಷ ಮೌಲ್ಯದ ಮೆಕ್ಕೆಜೋಳದ ಫಸಲು ಸುಟ್ಟು ಭಸ್ಮವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ಮೆಕ್ಕೆಜೋಳಕ್ಕೆ 1,500 ರಿಂದ 1,600 ರೂ. ದರ ಇದೆ. ದರ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅನ್ನದಾತನ ಮೆಕ್ಕೆಜೋಳದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಇದನ್ನೂ ಓದಿ: ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್
ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

