ದಾವಣಗೆರೆ: ಶಿವನ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ಹೊನ್ನಾಳಿ (Honnali) ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲೇಶ್ವರ ಕಾರ್ತಿಕೋತ್ಸವ ಹಿನ್ನೆಲೆ ಗ್ರಾಮದ ಪ್ರಮುಖ ಕಡೆ ಫ್ಲೆಕ್ಸ್ ಅಳವಡಿಕೆ ಮಾಡಲಾಗಿತ್ತು. ಮಹಾದ್ವಾರದ ಬಳಿ ಅಳವಡಿಕೆ ಮಾಡಿದ್ದ ಫ್ಲೆಕ್ಸ್‌ಗೆ ಶುಕ್ರವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಆರೋಪಿಗಳ ಬಂಧನಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಸೇರಿ ಮೂವರು ಆಸ್ಪತ್ರೆ ಪಾಲು
ಸಾಸ್ವೇಹಳ್ಳಿಗೆ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (M.P Renukacharya) ಭೇಟಿ ನೀಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿ, ಹಿಂದೂ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಿಡಿಗೇಡಿಗಳು ಮಾಡಿದ್ದಾರೆ. ಹಿಂದೂಗಳ ಹಬ್ಬಗಳಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಪೊಲೀಸರಿಗೆ ಕೂಡಲೇ ಕಿಡಿಗೇಡಿಗಳ ಬಂಧನ ಮಾಡುವಂತೆ ಸೂಚನೆ ಮಾಡಿದ್ದಾರೆ. ಏನಾದರೂ ಬಂಧನ ಮಾಡದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ.
ಸ್ಥಳಕ್ಕೆ ಹೊನ್ನಾಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿಡಿಗೇಡಿಗಳ ಬಂಧನಕ್ಕೆ ಕ್ರಮಕೈಗೊಂಡಿದ್ದಾರೆ. ಇದನ್ನೂ ಓದಿ: ಸಿಗರೇಟ್ ಪ್ಯಾಕ್, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್


